ಉಳ್ಳಾಲ: ಬಸ್ - ಬೈಕ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿ , ಇಬ್ಬರು ಗಾಯಗೊಂಡಿರುವ ಘಟನೆ ನಾಗುರಿ ಸಂಚಾರಿ ಠಾಣಾ ವ್ಯಾಪ್ತಿಯ ಕುತ್ತಾರು ಬಳಿ ಸಂಭವಿಸಿದೆ.
ಪೊಳಲಿ ನಿವಾಸಿ ಮಹಮ್ಮದ್ ಶಾಫಿ (20)ಮೃತರು. ಸಹ ಸವಾರರಾದ ರಾಣಿಪುರ ನಿವಾಸಿ ಮಹಮ್ಮದ್ ಇಮ್ರಾನ್ (20) ಮತ್ತು ಕಲ್ಲಡ್ಕ ನಿವಾಸಿ ಮಹಮ್ಮದ್ ಮೌಸೀನ್ (23) ಗಂಭೀರವಾಗಿ ಗಾಯಗೊಂಡಿದ್ದಾರೆ.
ರಾಣಿಪುರ ಕಡೆಗೆ ಗೆಳೆಯನ ಮನೆಗೆ ತೆರಳುತ್ತಿದ್ದಾಗ ಕುತ್ತಾರು ಕೊರಗಜ್ಜನ ಕಟ್ಟೆ ಬಳಿ ಓವರ್ ಟೇಕ್ ಮಾಡುವ ಧಾವಂತದಲ್ಲಿ ಎದುರು ಕಡೆಯಿಂದ ಬರುತ್ತಿದ್ದ ಬೈಕ್ ಬಸ್ಸಿಗೆ ಢಿಕ್ಕಿ ಹೊಡೆದಿದೆ.
ಪರಿಣಾಮ ಮೂವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಗ್ಗೆ ಶಾಫಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ನಾಗುರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.