ದಕ್ಷಿಣ 24 ಪರಗಣ (ಪಶ್ಚಿಮ ಬಂಗಾಳ): ಎರಡನೇ ಹಂತದ ವಿಧಾನಸಭೆ ಚುನಾವಣೆ ನಡೆಯುತ್ತಿರುವ ಪಶ್ಚಿಮ ಬಂಗಾಳದಲ್ಲಿಂದು ಬೆಳಗ್ಗೆಯಿಂದ ಅಹಿತಕರ ಘಟನೆಗಳು ನಡೆಯುತ್ತಿವೆ.
ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಪಾತರ್ ಪ್ರತಿಮಾ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಯೋಧ ಕಮಲ್ ಗಂಗೋಪಾಧ್ಯಾಯ ಅವರು ಶವವಾಗಿ ಪತ್ತೆಯಾಗಿದ್ದಾರೆ.
ಇದನ್ನೂ ಓದಿ: 2ನೇ ಹಂತದ ಮತದಾನಕ್ಕೂ ಮುನ್ನ ಟಿಎಂಸಿ ಕಾರ್ಯಕರ್ತನ ಹತ್ಯೆ: 7 ಮಂದಿ ಬಂಧನ
ಮತಗಟ್ಟೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸಿಆರ್ಪಿಎಫ್ ಯೋಧನ ಮೃತದೇಹ ಕಂಡುಬಂದಿದ್ದು, ಘಟನೆ ಬಳಿಕವೂ ಬಿರುಸಿನಿಂದ ಮತದಾನ ನಡೆಯುತ್ತಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
ಇದನ್ನೂ ಓದಿ - ನಂದಿಗ್ರಾಮ: ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆ
ಇಂದು ಬೆಳಗ್ಗೆ ನಂದಿಗ್ರಾಮ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತ ಹಾಗೂ ಕೇಶಪುರದಲ್ಲಿ ಟಿಎಂಸಿ ಕಾರ್ಯಕರ್ತನ ಮೃತದೇಹ ಪತ್ತೆಯಾಗಿತ್ತು.