ರಾಂಪುರ (ಉತ್ತರ ಪ್ರದೇಶ): ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದ್ದು, ಕೂದಲೆಳೆ ಅಂತರದಲ್ಲಿ ಅವರು ಅಪಾಯದಿಂದ ಪಾರಾಗಿದ್ದಾರೆ.
ಉತ್ತರ ಪ್ರದೇಶದ ರಾಂಪುರದಲ್ಲಿ ಘಟನೆ ನಡೆದಿದ್ದು, ನಾಲ್ಕು ವಾಹನಗಳು ಒಂದಕ್ಕೊಂದು ಡಿಕ್ಕಿಯಾಗಿವೆ. ಅದೃಷ್ಟವಶಾತ್ ಯಾರೊಬ್ಬರೂ ಗಾಯಗೊಂಡಿಲ್ಲ.
ಜನವರಿ 26ರಂದು ನಡೆದ ಟ್ರ್ಯಾಕ್ಟರ್ ರ‍್ಯಾಲಿ ವೇಳೆ ಮೃತಪಟ್ಟ ರೈತ ನರ್ವೀತ್ ಸಿಂಗ್ರ ಕುಟುಂಬಕ್ಕೆ ಸಾಂತ್ವನ ಹೇಳಲು ರಾಂಪುರಕ್ಕೆ ಪ್ರಿಯಾಂಕಾ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ.