ಉತ್ತರ 24 ಪರಗಣಗಳು (ಪಶ್ಚಿಮ ಬಂಗಾಳ): ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಕಚ್ಚಾ ಬಾಂಬ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಜಗದ್ದಾಲ್ ಅಸೆಂಬ್ಲಿ ಕ್ಷೇತ್ರದ ವ್ಯಾಪ್ತಿಗೆ ಬರುವ ಭಟ್ಪರಾ ಪ್ರದೇಶದ ಪಾಳು ಬಿದ್ದ ಕೊಠಡಿಯೊಂದರಲ್ಲಿ ಸ್ಫೋಟಕಗಳನ್ನು ಎರಡು ಬಕೆಟ್‌ನೊಳಗೆ ಇಡಲಾಗಿತ್ತು. ಪೊಲೀಸರು ಸ್ಥಳಕ್ಕೆ ತಲುಪಿ ತನಿಖೆ ನಡೆಸುತ್ತಿದ್ದಾರೆ.
ಇದಕ್ಕೂ ಮುನ್ನ ಏಪ್ರಿಲ್ 26ರಂದು ಜಿಲ್ಲೆಯ ಗುಪ್ತರ್‌ಬಾಗನ್ ಪ್ರದೇಶದಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ವರ್ಷದ ವಿದ್ಯಾರ್ಥಿ ಸಾವನ್ನಪ್ಪಿದ್ದ.