ಮುದ್ದೇಬಿಹಾಳ(ವಿಜಯಪುರ): ಕಳೆದ 2-3 ದಿನಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬಿಎಸ್ಎಫ್ ಯೋಧ, ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದ ಬಸವರಾಜ ಸಿದ್ದಪ್ಪ ಡೊಂಗರಗಾವಿ (28) ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ಇವರು ಸೇವೆಗೆ ಸೇರಿ 8-10 ವರ್ಷಗಳಾಗಿದ್ದು, ಪ್ರಸ್ತುತ ಬಿಹಾರದಲ್ಲಿ ಕರ್ತವ್ಯದಲ್ಲಿದ್ದರು. ಇತ್ತೀಚೆಗಷ್ಟೇ ರಜೆಯ ಮೇಲೆ ಸ್ವಗ್ರಾಮಕ್ಕೆ ಬಂದಾಗ ಆಲಮಟ್ಟಿ ಬಳಿ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಅಪಘಾತ ನಡೆದಿತ್ತು. ಮೃತರು ಪತ್ನಿ, ಎರಡು ಗಂಡು ಮಕ್ಕಳು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ