ನವದೆಹಲಿ: ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು)ನ ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ಗೆ ಜೀವ ಬೆದರಿಕೆ ಹಾಕಿದ್ದ ದೆಹಲಿಯ ಇಂಜಿನಿಯರ್ನನ್ನು ಗಾಜಿಯಾಬಾದ್ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶದ ನೋಯ್ಡಾದ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ದೆಹಲಿ ನಿವಾಸಿ ಜಿತೇಂದ್ರ ಬಂಧಿತ ಆರೋಪಿಯಾಗಿದ್ದಾನೆ. ಈತ ರೈತ ಮುಖಂಡ ರಾಕೇಶ್ ಟಿಕಾಯತ್ ಮೊಬೈಲ್ಗೆ ಏಪ್ರಿಲ್ನಿಂದ ಜೀವ ಬೆದರಿಕೆ ಸಂದೇಶಗಳನ್ನು ಕಳುಹಿಸಿಸುತ್ತಿದ್ದ ಎನ್ನಲಾಗಿದೆ. ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಹಿಂಪಡೆಯದಿದ್ದರೆ ಟಿಕಾಯತ್ರನ್ನು ಕೊಲೆ ಮಾಡುವುದಾಗಿ ಹೇಳಿದ್ದ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ: Citizenship: 13 ಜಿಲ್ಲೆಗಳಲ್ಲಿನ ಮುಸ್ಲಿಮೇತರ ನಿರಾಶ್ರಿತರಿಗೆ ಪೌರತ್ವ ಪಡೆಯಲು ಅರ್ಜಿ ಆಹ್ವಾನ
ಸದ್ಯ ಪೊಲೀಸರ ಅತಿಥಿಯಾಗಿರುವ ಆರೋಪಿ ಜಿತೇಂದ್ರನಿಂದ ಮೊಬೈಲ್ ವಶಪಡಿಸಿಕೊಂಡಿರುವ ಗಾಜಿಯಾಬಾದ್ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಇಂದು ನ್ಯಾಯಾಲಯದ ಮುಂದೆ ಆರೋಪಿಯನ್ನು ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.