ಮೈಸೂರು : ಕೌಟುಂಬಿಕ ಕಲಹದ ಹಿನ್ನೆಲೆ ಕುಡಿದ ಅಮಲಿನಲ್ಲಿ ಸಂಬಂಧಿಕನ ಮನೆಗೆ ನುಗ್ಗಿ ಕೊಲೆ ಮಾಡಿರುವ ಘಟನೆ ಹುಣಸೂರು ತಾಲೂಕಿನ ಧರ್ಮಾಪುರ ಗ್ರಾಮದಲ್ಲಿ ನಡೆದಿದೆ. 45 ವರ್ಷದ ದೊಡ್ಡರಾಜು ಎಂಬಾತ ಮೃತ ದುರ್ದೈವಿ.
ಕೊಲೆ ಆರೋಪಿ ಕೆಂಡನಾಯಕ ಪಾನಮತ್ತನಾಗಿ ಮನೆಗೆ ನುಗ್ಗಿ ಮಾರಕಾಸ್ತ್ರದಿಂದ ಕೊಲೆ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಈ ಸಂಬಂಧ ಆರೋಪಿಯನ್ನು ಬಂಧಿಸಿರುವ ಬಿಳಿಕೆರೆ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಕೊಲೆಗೆ ಕೌಟುಂಬಿಕ ಕಲಹ ಹಾಗೂ ಹಣಕಾಸಿನ ವಿಚಾರ ಕಾರಣ ಎಂದು ಗೊತ್ತಾಗಿದೆ.