ಮೈಸೂರು: ತಾನೇ ಸಾಕಿದ ಹಸು ತಿವಿದು ರೈತ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕಿನ ಕೆ.ಆರ್.ಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸಿದ್ದೇಗೌಡ(60) ಮೃತ ರೈತ. ಜಮೀನನಲ್ಲಿ ಮೇಯುತ್ತಿದ್ದ ಹಸು ಏಕಾಏಕಿ ಸಿದ್ದೇಗೌಡರ ಮೇಲೆ ದಾಳಿ ಮಾಡಿ ಹೊಟ್ಟೆಯ ಭಾಗಕ್ಕೆ ಬಲವಾಗಿ ತಿವಿದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ರೈತನನ್ನು ನಂಜನಗೂಡಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ರವಾನಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ರೈತ ಸಿದ್ದೇಗೌಡ ಇಂದು ಮೃತಪಟ್ಟಿದ್ದಾನೆ. ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.