ವಿರುಧುನಗರ್ (ತಮಿಳುನಾಡು): ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, 11 ಕಾರ್ಮಿಕರು ಮೃತಪಟ್ಟಿರುವ ಘಟನೆ ತಮಿಳುನಾಡಿನ ವಿರುಧುನಗರ್ ಜಿಲ್ಲೆಯಲ್ಲಿ ನಡೆದಿದೆ.
ವಿರುಧುನಗರದ ಸತೂರ್ ಪ್ರದೇಶದಲ್ಲಿನ ಅಚಂಕುಲಂ ಗ್ರಾಮದಲ್ಲಿರುವ ಮರಿಯಮ್ಮಲ್ ಪಟಾಕಿ ಕಾರ್ಖಾನೆಯಲ್ಲಿ ದುರಂತ ನಡೆದಿದೆ. ಅನೇಕ ಮಂದಿ ಗಾಯಗೊಂಡಿದ್ದು, ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: ಅಬ್ಬಾ!! ಅದೆಂಥಾ ಸೇಡು... ಕಾರ್ಪೊರೇಟರ್ ಮೇಲೆ ಎರಡ್ಮೂರು ಬಾರಿ ಕಾರು ಹತ್ತಿಸಿ ಕೊಲೆ! ವಿಡಿಯೋ...
ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
ಪರಿಹಾರ ಘೋಷಣೆ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಪ್ರತಿ ಕುಟುಂಬಕ್ಕೆ 2 ಲಕ್ಷ ರೂ ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ನೀಡುವುದಾಗಿ ಪ್ರಧಾನಿ ಕಚೇರಿ ತಿಳಿಸಿದೆ.