ಭದೋಹಿ (ಉತ್ತರ ಪ್ರದೇಶ): ಮೃತದೇಹವನ್ನು ತೆಗೆದುಕೊಂಡು ಹೋಗುತ್ತಿದ್ದ ಆ್ಯಂಬುಲೆನ್ಸ್, ರಸ್ತೆಬದಿ ನಿಂತಿದ್ದ ಟ್ರಕ್ಗೆ ಡಿಕ್ಕಿ ಹೊಡೆದಿದ್ದು, ಐವರು ಸ್ಥಳದಲ್ಲೇ ಸಾವನನ್ಪಪ್ಪಿದ್ದಾರೆ.
ಉತ್ತರ ಪ್ರದೇಶದ ಭದೋಹಿಯಲ್ಲಿ ಈ ಭೀಕರ ರಸ್ತೆ ಅಪಘಾತ ನಡೆದಿದೆ. ಅಸನ್ಸೋಲ್‌ನ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ವಿಪಿನ್ ಪಾಲ್ ಸಿಂಗ್ ಎಂಬವರು ಮೃತಪಟ್ಟಿದ್ದರು. ಮೃತದೇಹವನ್ನು ಅವರ ಸಹೋದರ ಹಾಗೂ ಇನ್ನಿಬ್ಬರು ಚಿತ್ತೋರ್ಗಡ್ಗೆ ಕರೆದೊಯ್ಯುತ್ತಿದ್ದರು. ಆದರೆ ಈ ವೇಳೆ ದುರ್ಘಟನೆ ನಡೆದಿದೆ.
ಮೃತನ ಸಹೋದರ ನವನೀತ್, ರಾಜ್ವೀರ್, ರಾಕೇಶ್, ಆಂಬ್ಯುಲೆನ್ಸ್ ಚಾಲಕ ಮತ್ತು ಸಿಬ್ಬಂದಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ವಾಹನಗಳನ್ನು ತೆರವುಗೊಳಿಸಿದ್ದು, ತನಿಖೆ ನಡೆಸುತ್ತಿದ್ದಾರೆ.