ETV Bharat / crime

ಲಾರಿ-ಕಾರು ನಡುವೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು - Ramanattukara in Kozhikode

ಕೇರಳದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮೃತದೇಹಗಳನ್ನು ಕಾರಿನಿಂದ ಹೊರಕ್ಕೆ ತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

Five killed in a car-lorry accident in Kozhikode
ಕೇರಳದಲ್ಲಿ ಭೀಕರ ರಸ್ತೆ ಅಪಘಾತ
author img

By

Published : Jun 21, 2021, 11:29 AM IST

ಕೋಯಿಕ್ಕೋಡ್​ (ಕೇರಳ): ಇಂದು ನಸುಕಿನ ಜಾವ 4.45ರ ವೇಳೆಗೆ ಎಸ್​ಯುವಿ ಕಾರು ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೇರಳದ ಕೋಯಿಕ್ಕೋಡ್​ನಲ್ಲಿ ನಡೆದಿದೆ.

ಮೃತರನ್ನು ಪಾಲಕ್ಕಾಡ್​ ಮೂಲದ ಮುಹಮ್ಮದ್ ಸಾಹಿರ್, ನಜೀರ್, ಜುಬೈರ್, ಅಸೈನಾರ್ ಮತ್ತು ಥಾಹಿರ್ ಎಂದು ಗುರುತಿಸಲಾಗಿದೆ. ಇವರೆಲ್ಲ ಕರಿಪುರ್​ ವಿಮಾನ ನಿಲ್ದಾಣದಿಂದ ಪಾಲಕ್ಕಾಡ್​ಗೆ ಹಿಂದಿರುಗುವ ವೇಳೆ ಕೋಯಿಕ್ಕೋಡ್​ನ ರಾಮನಟ್ಟುಕಾರ ಎಂಬಲ್ಲಿ ಅಪಘಾತ ಸಂಭವಿಸಿದೆ.

ಕೇರಳದಲ್ಲಿ ಭೀಕರ ರಸ್ತೆ ಅಪಘಾತ

ಇದನ್ನೂ ಓದಿ: ಕಲಬುರಗಿಯಲ್ಲಿ ಭೀಕರ ಕೊಲೆ.. ಕೈಕಟ್ಟಿ, ಪೆಟ್ರೋಲ್ ಸುರಿದು ವಿದ್ಯಾರ್ಥಿಯ ಬರ್ಬರ ಹತ್ಯೆ!

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಬಂದ ಪೊಲೀಸರು ಮೃತದೇಹಗಳನ್ನು ಹೊರಕ್ಕೆ ತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಲಾರಿ ಚಾಲನನ್ನು ವಶಕ್ಕೆ ಪಡೆದ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.