ಗರಿಯಾಬಂದ್ (ಛತ್ತೀಸ್ಘಡ): ಮಾರುತಿ ಈಕೋ ವ್ಯಾನ್ ಮರಕ್ಕೆ ಗುದ್ದಿ ಸ್ಥಳದಲ್ಲೇ ಐವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಛತ್ತೀಸ್ಘಡದ ಗರಿಯಾಬಂದ್ ಜಿಲ್ಲೆಯಲ್ಲಿ ನಡೆದಿದೆ.
ಅಪಘಾತದಲ್ಲಿ ಇನ್ನೂ ಆರು ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ರಾಯ್‌ಪುರದ ಅಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ನಿನ್ನೆ ರಾತ್ರಿ ರಾಯ್‌ಪುರದ ಧೋರಾ ಕೊನಾರಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ, ಗರಿಯಾಬಂದ್‌ನ ಮಾಲ್ಗಾಂವ್‌ಗೆ ವ್ಯಾನ್ನಲ್ಲಿ ಹಿಂದಿರುಗುತ್ತಿದ್ದರು. ಚಾಲಕ ನಿದ್ದೆ ಮಂಪರಿನಲ್ಲಿ ವಾಹನ ಚಲಾಯಿಸುತ್ತಿದ್ದದೇ ದುರಂತಕ್ಕೆ ಕಾರಣ ಎನ್ನಲಾಗಿದೆ.
ಸ್ಥಳಕ್ಕೆ ಬಂದ ಪೊಲೀಸರು ಮೃತದೇಹಗಳನ್ನು ಹೊರಕ್ಕೆ ತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಗಾಯಾಳುಗಳ ಪೈಕಿ ಒಬ್ಬರನ್ನು ಬಿಟ್ಟು ಉಳಿದವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.