ರಾಜ್‌ಗಢ (ಮಧ್ಯಪ್ರದೇಶ): ಕಂಟೇನರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ರಾಜ್‌ಗಢದಲ್ಲಿ ನಡೆದಿದೆ.
ಮಹಾರಾಷ್ಟ್ರ ನಾಸಿಕ್‌ಗೆ ಹೋಗುತ್ತಿದ್ದ ಟವೆರಾ ಕಾರು ರಾಷ್ಟ್ರೀಯ ಹೆದ್ದಾರಿ - 3ರಲ್ಲಿ ಅತಿವೇಗದಲ್ಲಿ ಬಂದು ಹಿಂದಿನಿಂದ ಕಂಟೇನರ್‌ಗೆ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಸಾರಂಗ್‌ಪುರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ.
ಇದನ್ನೂ ಓದಿ: ಬಸ್-ಟ್ರಕ್ ಮಧ್ಯೆ ಮುಖಾಮುಖಿ ಡಿಕ್ಕಿ.. 50ಕ್ಕೂ ಹೆಚ್ಚು ಪ್ರಯಾಣಿಕರು ಸುಟ್ಟು ಭಸ್ಮ!
ಸ್ಥಳಕ್ಕೆ ಬಂದ ಸಾರಂಗ್‌ಪುರ ಪೊಲೀಸರು ವಾಹನಗಳ ತೆರವುಗೊಳಿಸಿದ್ದು, ತನಿಖೆ ನಡೆಸುತ್ತಿದ್ದಾರೆ.