ಶಹಜಹಾನ್ಪುರ (ಉತ್ತರ ಪ್ರದೇಶ): ಟ್ರಕ್ ಹಾಗೂ ಎರಡು ಬೈಕ್ಗಳಿಗೆ ಬರೇಲಿಯಿಂದ ಬರುತ್ತಿದ್ದ ಚಂಡೀಗಢ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್ಪುರದಲ್ಲಿ ನಡೆದಿದೆ.
ಸಿಗ್ನಲ್ ವೈಫಲ್ಯದಿಂದಾಗಿ ಇಂದು ಮುಂಜಾನೆ 5.30ರ ವೇಳೆಗೆ ಹುಲಸಂಗ್ರಾ ರೈಲ್ವೆ ಕ್ರಾಸಿಂಗ್ ಗೇಟ್ ಬಳಿ ದುರಂತ ಸಂಭವಿಸಿದೆ. ಇನ್ನೂ ಕೆಲವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ವಿಶಾಖಪಟ್ಟಣಂ ತಲುಪಿದ 'ಆಕ್ಸಿಜನ್ ಎಕ್ಸ್‌ಪ್ರೆಸ್' ರೈಲು - ವಿಡಿಯೋ
ಸ್ಥಳಕ್ಕೆ ದೌಡಾಯಿಸಿರುವ ಶಹಜಹಾನ್ಪುರ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಪರಿಶೀಲನೆ ನಡೆಸಿ, ಸ್ಥಗಿತಗೊಂಡ ರೈಲು ಸಂಚಾರಕ್ಕೆ ವ್ಯವಸ್ಥೆ ಮಾಡಿಸುತ್ತಿದ್ದಾರೆ. ಘಟನೆ ಸಂಬಂಧ ತನಿಖೆ ನಡೆಸುತ್ತಿರುವುದಾಗಿ ಎಸ್ಪಿ ಎಸ್. ಆನಂದ್ ತಿಳಿಸಿದ್ದಾರೆ.
ಸಿಎಂ ಪರಿಹಾರ ಘೋಷಣೆ
ಸಾವಿಗೆ ಸಂತಾಪ ಸೂಚಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಗಾಯಾಳುಗಳಿಗೆ ಸರಿಯಾದ ಚಿಕಿತ್ಸೆ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಮೃತರ ಸಂಬಂಧಿಗಳಿಗೆ ತಲಾ 2 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ.