ಪ್ರಯಾಗ್‌ರಾಜ್(ಉತ್ತರ ಪ್ರದೇಶ) : ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಪ್ರಯಾಗ್‌ರಾಜ್‌ನ ಫಾಫಮೌ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪತಿ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಫಾಫಮೌನ ಗೋಹ್ರಿ ಕ್ರಾಸ್ ಬಳಿಯ ಮೋಹನ್‌ಗಂಜ್ ಗ್ರಾಮದಲ್ಲಿ ಹತ್ಯೆ ಮಾಡಲಾಗಿದೆ. ಫೂಲಚಂದ್ರ, ಪತ್ನಿ ಮೀನು ದೇವಿ, ಪುತ್ರಿ ಸಪ್ನಾ ಹಾಗೂ ಪುತ್ರ ಶಿವ ಕೊಲೆಯಾದವರು.
ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಹಳೆ ದ್ವೇಷ ಇಲ್ಲವೇ ದರೋಡೆ ಮಾಡಲು ಮನೆಗೆ ನುಗ್ಗಿ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಿಂದ ಫಾಫಮೌ ಪ್ರದೇಶದ ಜನ ಬೆಚ್ಚಿಬಿದ್ದಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಜನ ಸ್ಥಳದಲ್ಲಿ ಜಮಾಯಿಸಿದ್ದಾರೆ.
ಶ್ವಾನ ದಳ ಹಾಗೂ ವಿಧಿವಿಜ್ಞಾನ ತಂಡವನ್ನು ಸ್ಥಳಕ್ಕೆ ಕರೆಸಿಕೊಂಡಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹತ್ಯೆಗೆ ಸದ್ಯ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಇದನ್ನೂ ಓದಿ: ಬೆಂಗಳೂರು ಬಳಿ ರಸ್ತೆ ಅಪಘಾತ.. 3 ದಿನದ ಹಿಂದೆ ಮದುವೆ, ವರ ಸಾವು, ವಧು ಸ್ಥಿತಿ ಗಂಭೀರ!