ETV Bharat / crime

ಇಬ್ಬರು ಬೈಕ್​ ಕಳ್ಳರ ಬಂಧನ: 8 ಲಕ್ಷ ರೂ. ಮೌಲ್ಯದ 8 ಮೋಟಾರ್ ಸೈಕಲ್ ವಶ

author img

By

Published : Feb 12, 2021, 4:32 AM IST

ನಗರದ ಕೆ.ಎನ್.ಪುರದ ಗ್ಯಾರೇಜ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಮ್ಮದ್ ಶೋಹೇಬ್ (19) ಮತ್ತು ಮೆಕ್ಯಾನಿಕ್ ಅರ್ಬಾಜ್ ಖಾನ್ (19) ಬಂಧಿತ ಆರೋಪಿಗಳು. ಬಂಧಿತರಿಂದ 8 ಲಕ್ಷ ರೂ. ಮೌಲ್ಯದ 8 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

bike thieves
bike thieves

ಮೈಸೂರು: ರಾತ್ರಿ ವೇಳೆಯಲ್ಲಿ ಬೆಲೆಬಾಳುವ ಮೋಟಾರ್ ಸೈಕಲ್​ಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಉದಯಗಿರಿ ಠಾಣೆ ಪೊಲೀಸರು 8 ಲಕ್ಷ ರೂ. ಮೌಲ್ಯದ 8 ಮೋಟಾರ್ ಸೈಕಲ್​ಗಳನ್ನು ವಶಪಡಿಸಿಕೊಂಡಿದ್ದಾರೆ.

ನಗರದ ಕೆ.ಎನ್.ಪುರದ ಗ್ಯಾರೇಜ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಮ್ಮದ್ ಶೋಹೇಬ್ (19) ಮತ್ತು ಮೆಕ್ಯಾನಿಕ್ ಅರ್ಬಾಜ್ ಖಾನ್ (19) ಬಂಧಿತ ಆರೋಪಿಗಳು.

ಬಂಧಿತರಿಂದ 8 ಲಕ್ಷ ರೂ. ಮೌಲ್ಯದ 8 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಜನವರಿ 31ರಂದು ರಾಜೀವನಗರದ ಮೊಹಮ್ಮದ್ ಸಲ್ಮಾನ್ ಎಂಬುವರ ಬೈಕ್ ಕಳ್ಳತನವಾಗಿತ್ತು. ಈ ಕುರಿತು ಪ್ರಕರಣ ದಾಖಲಿಸಿ ತನಿಖೆಕೈಗೊಂಡ ಉದಯಗಿರಿ ಪೊಲೀಸರು, ಇಲ್ಲಿನ ಉದ್ಯಾನ ಬಳಿ ಬೈಕ್​ನಲ್ಲಿ ಬರುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳ್ಳತನ ಕೃತ್ಯಗಳು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಮೆಡಿಕಲ್ ಸೀಟ್ ಕೊಡಿಸುತ್ತೇನೆಂದು ಲಕ್ಷಾಂತರ ಹಣ ಪೀಕಿದ ಖತರ್ನಾಕ್ ಮಹಿಳೆ..

ಉದಯಗಿರಿ, ಎನ್.ಆರ್.ಮೊಹಲ್ಲಾ, ವಿಜಯನಗರ, ನಜರ್‌ಬಾದ್, ಸರಸ್ವತಿಪುರಂ, ದೇವರಾಜ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.