ಉದಯಪುರ(ರಾಜಸ್ಥಾನ): ದೇಶದಲ್ಲಿ ಎಷ್ಟೇ ಕಠಿಣ ನಿಯಮಗಳು ಜಾರಿ ಮಾಡಿದರೂ ಮಹಿಳೆಯರ ಮೇಲಿನ ದೌರ್ಜನ್ಯಗಳಿಗೆ ಬ್ರೇಕ್ ಬೀಳುವಂತೆ ಕಾಣ್ತಿಲ್ಲ. ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗ್ಯಾಂಗ್ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಪೈಶಾಚಿಕ ಕೃತ್ಯ ಉದಯಪುರ ಜಿಲ್ಲೆ ಝಡೋಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹಾಡಹಗಲೇ ಈ ಕೃತ್ಯ ನಡೆದಿದ್ದು, ಘಟನೆ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಝಡೋಲ್ ಪೊಲೀಸ್ ಪೊಲೀಸ್ ಠಾಣೆ ವ್ಯಾಪ್ತಿಯ ಬಾಗ್‌ಪುರ ಚೆಕ್ ಪೋಸ್ಟ್‌ನಿಂದ ಕೇವಲ 500 ಮೀಟರ್ ದೂರದಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತೆ ಇಬ್ಬರು ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಘಟನೆ ಕುರಿತು ಮಾಹಿತಿ ಪಡೆದ ಹಿರಿಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ವಿವಾಹಿತ ಮಹಿಳೆ ರಸ್ತೆಯಲ್ಲಿ ಹೋಗುತ್ತಿದ್ದಾಗ ಮೂವರು ಯುವಕರು ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದು ದಾರಿ ಮಧ್ಯೆ ಆಕೆಯನ್ನು ತಡೆದು ಅಸಭ್ಯವಾಗಿ ವರ್ತಿಸಿದ್ದಾರೆ. ಬಳಿಕ ಇಬ್ಬರು ಯುವಕರು ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ಮಾಹಿತಿ ಲಭ್ಯವಾಗಿದೆ.
ಸಂತ್ರಸ್ತೆಯ ದೂರಿನ ಮೇರೆಗೆ ಪೊಲೀಸರು ಆರೋಪಿಗಳಿಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳು ಸುತ್ತಮುತ್ತಲಿನ ನಿವಾಸಿಗಳು ಎಂದು ಹೇಳಲಾಗುತ್ತಿದ್ದು, ಪೊಲೀಸರು ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದಾರೆ.
ಈ ವಿಚಾರ ಇದೀಗ ರಾಜಸ್ಥಾನದಲ್ಲಿ ಆಡಳಿತ ನಡೆಸುತ್ತಿರುವ ಅಶೋಕ್ ಗೆಹ್ಲೋಟ್ ಹಾಗೂ ಪ್ರತಿಪಕ್ಷಗಳ ನಡುವಿನ ವಾಕ್ಸಮರಕ್ಕೂ ಕಾರಣವಾಗಿದೆ. ಪ್ರತಿಪಕ್ಷದ ಉಪನಾಯಕ ರಾಜೇಂದ್ರ ರಾಥೋಡ್ ಘಟನೆಯನ್ನು ಖಂಡಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ