ಚುರು(ರಾಜಸ್ಥಾನ): ಇಬ್ಬರು ಅಪ್ರಾಪ್ತ ಸಹೋದರಿಯರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಪ್ರಕರಣ ರಾಜಸ್ಥಾನದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತೆಯ ತಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಜನವರಿ 31ರ ರಾತ್ರಿ ಈ ಘಟನೆ ನಡೆದಿದ್ದು, ಅಪ್ರಾಪ್ತ ಸಹೋದರಿಯರಿಬ್ಬರು ವಾಸವಾಗಿದ್ದ ಮನೆಗೆ ನುಗ್ಗಿರುವ ಮೂವರು ಕಾಮುಕರು ಅತ್ಯಾಚಾರವೆಸಗಿದ್ದು, ಘಟನೆ ಬಗ್ಗೆ ಬಾಯ್ಬಿಟ್ಟರೆ ತಂದೆಯ ಕೊಲೆ ಮಾಡುವ ಬೆದರಿಕೆ ಹಾಕಿ ಪರಾರಿಯಾಗಿದ್ದರು. ಇದರಲ್ಲಿ ಓರ್ವ ಪೋಷಕರ ಕೈಯಲ್ಲಿ ಸಿಕ್ಕಿಬಿದ್ದಿದ್ದು, ಗ್ರಾಮಸ್ಥರೆಲ್ಲರೂ ಸೇರಿ ಆತನಿಗೆ ಛೀಮಾರಿ ಹಾಕಿದ್ದರು. ಈ ಆಕ್ರೋಶದಲ್ಲೇ ಬಾಲಕಿಯರ ಅಶ್ಲೀಲ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದ.
ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತ ಬಾಲಕಿಯರ ತಂದೆ ಸರ್ದಾರ್ಶಹರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೂರು ನೀಡಿದ್ದರು. ಆರೋಪಿಗಳ ವಿರುದ್ಧ ಪೋಕ್ಸೋ ಸೇರಿದಂತೆ ವಿವಿಧ ಸೆಕ್ಷನ್ಗಳ ಅಡಿ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಕೂಲಿ ಕೆಲಸ ಮಾಡ್ತಿದ್ದ ಕಾರ್ಮಿಕನಿಗೆ ಐವರು ಹೆಣ್ಣು ಮಕ್ಕಳಿದ್ದು, ಇದರಲ್ಲಿ ಈಗಾಗಲೇ ಮೂವರಿಗೆ ವಿವಾಹ ಮಾಡಲಾಗಿದೆ. ಅಪ್ರಾಪ್ತ ಬಾಲಕಿಯರಿಬ್ಬರು ಮನೆಯಲ್ಲಿ ವಾಸವಿದ್ದು, ಅವರ ಮೇಲೆ ಕಳೆದ ಒಂದು ವರ್ಷದಿಂದಲೂ ದೈಹಿಕವಾಗಿ ಶೋಷಣೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಅತ್ಯಾಚಾರದ ಬಗ್ಗೆ ಯಾರಿಗಾದ್ರೂ ಮಾಹಿತಿ ತಿಳಿಸಿದರೆ ತಂದೆಯನ್ನ ಕೊಲೆ ಮಾಡುವುದಾಗಿ ಕಾಮುಕುರು ಬೆದರಿಕೆ ಸಹ ಹಾಕಿದ್ದರು ಎಂದು ವರದಿಯಾಗಿದೆ.
ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ