ಹಾಸನ: ಜೀವನದಲ್ಲಿ ಜಿಗುಪ್ಸೆ ಹೊಂದಿದ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ನಲ್ಲಿಯೇ ನೇಣಿಗೆ ಶರಣಾಗಿರುವ ಘಟನೆ ಹೊಳೆನರಸೀಪುರ ತಾಲೂಕಿನಲ್ಲಿ ನಡೆದಿದೆ.
ಓದಿ: ಇನ್ನೂ ಟೆಂಡರ್ ಆಗಿಲ್ಲ, ಭ್ರಷ್ಟಾಚಾರ ಹೇಗೆ ಸಾಧ್ಯ? : ಸಚಿವ ಸುಧಾಕರ್
ಸುಪ್ರಿತಾ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದು, ಹೊಳೆನರಸೀಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಇಂದು ಬೆಳಗ್ಗೆ ಎಂದಿನಂತೆ ಸ್ನಾನಕ್ಕೆಂದು ಹೋದವಳು ಸ್ನಾನದ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾಳೆ. ಮೂಲತಃ ಆಲೂರು ತಾಲೂಕಿನ ಪಾಳ್ಯ ಗ್ರಾಮದ ವಿಶ್ವನಾಥ ಆಚಾರಿ ಎಂಬುವರ ಪುತ್ರಿ ಎಂದು ಗುರುತಿಸಲಾಗಿದೆ.
ನನ್ನ ಸಾವಿಗೆ ಯಾರೂ ಕಾರಣವಲ್ಲ. ನನ್ನ ಸ್ವ-ಇಚ್ಚೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆಂದು ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾಳೆ. ಡಿ.ದೇವರಾಜು ಅರಸು ಹಿಂದುಳಿದ ವರ್ಗದ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಆಶ್ರಯ ಪಡೆದಿದ್ದು, ಇಂದು ಸ್ನಾನಕ್ಕೆ ಹೋಗುತ್ತೇನೆಂದು ಹೋದವಳು 2 ಗಂಟೆಯಾದರೂ ಬಾರದ ಕಾರಣ ಸಹಪಾಠಿಗಳು ಬಾಗಿಲು ಒಡೆದಾಗ ಪ್ರಕರಣ ಬೆಳಕಿಗೆ ಬಂದಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೊಳನರಸೀಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.