ಮುಂಬೈ(ಮಹಾರಾಷ್ಟ್ರ): ಜಲ್ಗಾಂವ್ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ಪೊಲೀಸರು ಬಲವಂತವಾಗಿ ನೃತ್ಯ ಮಾಡಿಸಲು ಒತ್ತಾಯಿಸಿದ್ದಾರೆಂಬ ಪ್ರಕರಣ ಬೆಳಕಿಗೆ ಬಂದಿದೆ.
ವಿಧಾನಸಭೆಯಲ್ಲಿ ಬಿಜೆಪಿ ಮುಖಂಡ ಸುಧೀರ್ ಮುಂಗಂತಿವಾರ್ ಈ ಪ್ರಕರಣ ಬಹಿರಂಗಗೊಳಿಸಿದ್ದಾರೆ. ಇದರ ಬೆನ್ನಲ್ಲೇ ತನಿಖೆ ನಡೆಸಲು ಸಮಿತಿ ರಚನೆ ಮಾಡಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಅನಿಲ್ ದೇಶ್ಮುಖ್ ತಿಳಿಸಿದರು.
ಜಲ್ಗಾಂವ್ ಹಾಸ್ಟೆಲ್ನಲ್ಲಿ ತನಿಖೆಯ ನೆಪದಲ್ಲಿ ಹೊರಗಿನವರು ಒಳಗೆ ಬರದಂತೆ ಪ್ರವೇಶ ನಿರಾಕರಣೆ ಮಾಡಲಾಗಿದೆ. ಬಳಿಕ ಕೆಲ ಹುಡುಗಿಯರನ್ನು ಬಲವಂತವಾಗಿ ಬಟ್ಟೆ ಬಿಚ್ಚಿಸಿ, ಡ್ಯಾನ್ಸ್ ಮಾಡಿಸಲು ಒತ್ತಾಯಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಜತೆಗೆ ಇದರ ವಿಡಿಯೋ ಕ್ಲಿಪ್ ಕೂಡ ಹೊರಬಿದ್ದಿದೆ.
ಇದನ್ನೂ ಓದಿ: ರೈಲ್ವೆ ಹಳಿ ದಾಟಲು ಹೋಗಿ ಪ್ರಾಣ ಕಳೆದುಕೊಂಡ ವ್ಯಕ್ತಿ... ಸಿಸಿಟಿವಿಯಲ್ಲಿ ಭೀಕರ ದೃಶ್ಯ!
ಈ ಘಟನೆ ಗೊತ್ತಾಗುತ್ತಿದ್ದಂತೆ ಮಾತನಾಡಿರುವ ದೇಶ್ಮುಖ್, ಇದು ಅತ್ಯಂತ ದುರದೃಷ್ಟಕರ. ಈಗಾಗಲೇ ತನಿಖೆ ನಡೆಸಲು ನಾಲ್ವರು ಸದಸ್ಯರ ಉನ್ನತ ಮಟ್ಟದ ಅಧಿಕಾರಿಗಳ ಸಮಿತಿ ರಚನೆ ಮಾಡಲಾಗಿದೆ. ಮುಂದಿನ ಎರಡು ದಿನಗಳಲ್ಲಿ ವರದಿ ಸಲ್ಲಿಕೆ ಮಾಡುವಂತೆ ತಿಳಿಸಲಾಗಿದೆ. ಇದಾದ ಬಳಿಕ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.