ETV Bharat / crime

ನೇಣು ಬಿಗಿದ ಸ್ಥಿತಿಯಲ್ಲಿ ಬಂಗಾಳದ ಮತ್ತೊಬ್ಬ ಬಿಜೆಪಿ ಕಾರ್ಯಕರ್ತನ ಶವ ಪತ್ತೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಫಾಲ್ತಾ ಪ್ರದೇಶದಲ್ಲಿನ ಪಂಚಲಕಿ ಗ್ರಾಮದ ತೋಟವೊಂದರಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ.

Hanging body of bjp worker found in falta
ನೇಣು ಬಿಗಿದ ಸ್ಥಿತಿಯಲ್ಲಿ ಮತ್ತೊಬ್ಬ ಬಂಗಾಳ ಬಿಜೆಪಿ ಕಾರ್ಯಕರ್ತನ ಶವ ಪತ್ತೆ
author img

By

Published : May 16, 2021, 2:26 PM IST

ಫಾಲ್ತಾ (ಪಶ್ಚಿಮ ಬಂಗಾಳ): ವಿಧಾನಸಭೆ ಚುನಾವಣೆ ಬಳಿಕ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರಗಳು ಮುಂದುವರೆದಿದ್ದು, ಇಂದು ಮತ್ತೊಬ್ಬ ಬಿಜೆಪಿ ಕಾರ್ಯಕರ್ತನ ಮೃತದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಫಾಲ್ತಾ ಪ್ರದೇಶದಲ್ಲಿನ ಪಂಚಲಕಿ ಗ್ರಾಮದ ತೋಟವೊಂದರಲ್ಲಿ ಅರಿಂದಮ್ ಮಿಡ್ಡಾ (26) ಎಂಬ ಬಿಜೆಪಿ ಕಾರ್ಯಕರ್ತ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.

ನೇಣು ಬಿಗಿದ ಸ್ಥಿತಿಯಲ್ಲಿ ಮತ್ತೊಬ್ಬ ಬಂಗಾಳ ಬಿಜೆಪಿ ಕಾರ್ಯಕರ್ತನ ಶವ ಪತ್ತೆ

ನಿನ್ನೆ ರಾತ್ರಿಯಷ್ಟೇ ಉತ್ತರ 24 ಪರಗಣ ಜಿಲ್ಲೆಯ ಭತ್ಪರ ಪ್ರದೇಶಲ್ಲಿ ದುಷ್ಕರ್ಮಿಗಳು ಬಾಂಬ್ ಸ್ಫೋಟಿಸಿದ್ದರು, ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದರು.

ಇದನ್ನೂ ಓದಿ: ಬಂಗಾಳದಲ್ಲಿ ನಿಲ್ಲದ ಹಿಂಸಾಚಾರ: ಬಾಂಬ್​ ದಾಳಿಗೆ ಓರ್ವ ಬಲಿ, ಐವರಿಗೆ ಗಾಯ

ಮೇ 2ರಂದು ವಿಧಾನಸಭೆ ಚುನಾವಣೆ ಫಲಿತಾಂಶ ಬಂದ ಕ್ಷಣದಿಂದಲೇ ರಾಜ್ಯದಲ್ಲಿ ಹಿಂಸಾಚಾರ ಉಲ್ಬಣಗೊಂಡಿದೆ. ಬಿಜೆಪಿಯ ಹಲವು ಹಾಗೂ ಟಿಎಂಸಿಯ ಕೆಲ ಕಾರ್ಯಕರ್ತರು ಹತ್ಯೆಯಾಗಿದ್ದಾರೆ. ಬಿಜೆಪಿ ಕಚೇರಿಗಳು, ಕಾರ್ಯಕರ್ತರ ಮನೆ ಧ್ವಂಸವಾಗಿವೆ. ನೇಣು ಬಿಗಿದ ಸ್ಥಿತಿಯಲ್ಲಿ, ರಕ್ತಸಿಕ್ತ ಸ್ಥಿತಿಯಲ್ಲಿ ಕಾರ್ಯಕರ್ತರ ಮೃತದೇಹಗಳು ಪತ್ತೆಯಾಗಿದ್ದವು. ಎರಡೂ ಪಕ್ಷಗಳ ಸದಸ್ಯರು ಒಬ್ಬರ ವಿರುದ್ಧ ಒಬ್ಬರು ಆರೋಪಿಸಿಕೊಳ್ಳುತ್ತಿದ್ದು, ಹಿಂಸಾಚಾರ ಮುಂದುವರೆದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.