ಚಂಡೀಗಢ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧದ ರೈತರ ಪ್ರತಿಭಟನೆ ನೂರು ದಿನ ದಾಟಿದರೂ ಸಮಸ್ಯೆ ಮಾತ್ರ ಬಗೆಹರಿದಿಲ್ಲ. ಇದರಿಂದ ನೊಂದ ಮತ್ತೊಬ್ಬ ರೈತ ನೇಣಿಗೆ ಶರಣಾಗಿದ್ದಾನೆ.
ಟಿಕ್ರಿ-ಬಹದ್ದೂರ್‌ಗ ಗಡಿಯಲ್ಲಿ ಇಂದು ಹರಿಯಾಣದ ಹಿಸಾರ್ ಜಿಲ್ಲೆಯ ರಾಜ್ಬೀರ್ (55) ಎಂಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈವರೆಗೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ 240ಕ್ಕೂ ಹೆಚ್ಚು ರೈತರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.
ಇದನ್ನೂ ಓದಿ: ಸಿಡಿ ಪ್ರಕರಣ: ಯುವತಿಯ ಮನೆ ವಿಳಾಸ ಪತ್ತೆ ಹಚ್ಚಿದ ಪೊಲೀಸರು
ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ಸಾವಿರಾರು ರೈತರು ದೆಹಲಿಯ ಗಡಿಭಾಗಗಳಲ್ಲಿ ಕಳೆದ 100 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತ ಮುಖಂಡರೊಂದಿಗೆ ಕೇಂದ್ರ ಸರ್ಕಾರ ಹಲವು ಸುತ್ತು ಮಾತುಕತೆ ನಡೆಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಪಟ್ಟುಬಿಡದ ಅನ್ನದಾತರು ತಮ್ಮ ಧರಣಿ ಮುಂದುವರಿಸಿದ್ದಾರೆ.