ಭಿವಾನಿ : ಹರಿಯಾಣದ ಭಿವಾನಿ ಜಿಲ್ಲೆಯ ದಡಮ್ ಗಣಿಗಾರಿಕೆ ಪ್ರದೇಶದಲ್ಲಿ ಭಾರಿ ದುರಂತ ಸಂಭವಿಸಿದೆ. ಗಣಿಗಾರಿಕೆ ವೇಳೆ ಬೆಟ್ಟ ಕುಸಿದು ನಾಲ್ವರು ಸಾವನ್ನಪ್ಪಿದ್ದಾರೆ.
ಕನಿಷ್ಠ 12 ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಸಾಧ್ಯತೆ ಇದೆ. ಘಟನೆಯಲ್ಲಿ ಗಣಿಗಾರಿಕೆಗೆ ಬಳಸುತ್ತಿದ್ದ 8 ರಿಂದ 10 ವಾಹನಗಳು ಕೂಡ ಕುಸಿದ ಬೆಟ್ಟದ ಅವಶೇಷಗಳ ಅಡಿಯಲ್ಲಿ ಅಪ್ಪಚ್ಚಿಯಾಗಿ ಹೋಗಿವೆ.
ಇಂದು ಬೆಳಗ್ಗೆ 8.15ರ ಸುಮಾರಿಗೆ ಗಣಿಗಾರಿಕೆ ನಡೆಯುತ್ತಿದ್ದಾಗ ಪರ್ವತದ ಬಹುಭಾಗ ಹಠಾತ್ತನೆ ಬಿರುಕು ಬಿಟ್ಟು ಕುಸಿದಿದೆ. ಘಟನೆ ವೇಳೆ ಸ್ಥಳದಲ್ಲಿ ನಿಂತಿದ್ದ ಸುಮಾರು ಅರ್ಧ ಡಜನ್ ಪಾಪ್‌ಲ್ಯಾಂಡ್ ಯಂತ್ರಗಳು ಮತ್ತು ಡಂಪರ್‌ಗಳು ಹೂತು ಹೋಗಿವೆ.
ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಈಗಾಗಲೇ ಮೂವರನ್ನು ರಕ್ಷಿಸಲಾಗಿದೆ.
ಇದನ್ನೂ ಓದಿ: ಹೊಸ ವರ್ಷದಂದೇ ಶಿವಕಾಶಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಜೀವ ದಹನ