ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಬಿಜೆಪಿ ಮುಖಂಡನನ್ನು ಗುರಿಯಾಗಿಸಿಕೊಂಡು ಅಪರಿಚಿತ ಉಗ್ರರು ಗುಂಡು ಹಾರಿಸಿದ್ದು, ಓರ್ವ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ.
ಶ್ರೀನಗರದ ನೌಗಾಮ್ ಪ್ರದೇಶದಲ್ಲಿರುವ ಬಿಜೆಪಿ ಮುಖಂಡ ಅನ್ವರ್ ಖಾನ್ ಅವರ ಮನೆ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಅನ್ವರ್ ಖಾನ್ ಅವರ ಮನೆಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ನಿಯೋಜನೆಗೊಂಡಿದ್ದ ಪೊಲೀಸ್ ಕಾನ್ಸ್‌ಟೇಬಲ್ ರಮೀಝ್ ರಾಝಾ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರು ಮೃತಪಟ್ಟಿರುವುದಾಗಿ ಶ್ರೀನಗರ ಪೊಲೀಸರು ಮಾಹಿತಿ ನೀಡಿದ್ದಾರೆ.
![House of BJP leader Anwar Khan attacked by terrorists in Nowgam](https://etvbharatimages.akamaized.net/etvbharat/prod-images/11236152_jiksd.jpg)
ನೌಗಾಮ್ ಪ್ರದೇಶವನ್ನು ಸುತ್ತುವರೆದಿರುವ ಭದ್ರತಾ ಪಡೆ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.