ETV Bharat / crime

7 ಕೆಜಿ ಸ್ಫೋಟಕ ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡು ವಶಕ್ಕೆ ಪಡೆದ ಅಸ್ಸೋಂ ಪೊಲೀಸ್​

ಹೊಸದಾಗಿ ರಚನೆಯಾದ ಎನ್‌ಎಲ್‌ಎಫ್‌ಬಿ ಉಗ್ರ ಸಂಘಟನೆಯ ಸದಸ್ಯರಿಗೆ ನೀಡಲು ಸಾಗಿಸುತ್ತಿದ್ದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಅಸ್ಸೋಂ ಪೊಲೀಸರು ವಶಪಡಿಸಿಕೊಂಡಿದ್ದು, ಓರ್ವನನ್ನು ಬಂಧಿಸಿದ್ದಾರೆ.

Huge amount of arms, ammunition recovered in Assam's Chirang district
7 ಕೆಜಿ ಸ್ಫೋಟಕ ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡು ವಶಕ್ಕೆ ಪಡೆದ ಅಸ್ಸೋಂ ಪೊಲೀಸ್​
author img

By

Published : Apr 18, 2021, 11:35 AM IST

ಚಿರಾಂಗ್ (ಅಸ್ಸೋಂ): ಏಳು ಕೆಜಿ ಸ್ಫೋಟಕಗಳು, ಎರಡು ಹ್ಯಾಂಡ್​ಮೇಡ್​ ಗನ್​ಗಳು, 106 ಕಬ್ಬಿಣದ ಚೆಂಡುಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನು ಅಸ್ಸೋಂ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಅಸ್ಸೋಂನ ಚಿರಾಂಗ್​ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ದಾಳಿ ನಡೆಸಿ ಇವುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕೆಲವು ಅನುಮಾನಾಸ್ಪದ ವ್ಯಕ್ತಿಗಳು ಹೊಸದಾಗಿ ರಚನೆಯಾಗಿರುವ 'ನ್ಯಾಷನಲ್ ಲಿಬರೇಶನ್ ಫ್ರಂಟ್ ಆಫ್ ಬೊಡೊಲ್ಯಾಂಡ್' (NLFB) ಎಂಬ ಉಗ್ರ ಸಂಘಟನೆಯ ಸದಸ್ಯರಿಗೆ ಈ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ನೀಡುತ್ತಿದ್ದರು ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಲ್ ಆರ್ ಬಿಷ್ಣೋಯ್ ತಿಳಿಸಿದ್ದಾರೆ.

ಇದನ್ನೂ ಓದಿ: ಇದೆಂಥ ವಿಕೃತಿ.. ಬೈಕ್​​ಗೆ ನಾಯಿ ಕಟ್ಟಿ ರಸ್ತೆಯುದ್ದಕ್ಕೂ ಎಳೆದೊಯ್ದ ದುಷ್ಟರು!

ಈ ಸಂಬಂಧ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಎನ್‌ಎಲ್‌ಎಫ್‌ಬಿ ಉಗ್ರರು ಬೋಡೋಲ್ಯಾಂಡ್ ಪ್ರಾದೇಶಿಕ ಪ್ರದೇಶ (ಬಿಟಿಆರ್)ದಲ್ಲಿ ವಿಧ್ವಂಸಕ ಚಟುವಟಿಕೆಗಳನ್ನು ನಡೆಸಲು ಪ್ರಯತ್ನಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ ಎಂದು ಬಿಷ್ಣೋಯ್ ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.