ETV Bharat / crime

ಪ್ರತ್ಯೇಕ ಪ್ರಕರಣ: ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ - ರಾಮಾಪುರ ಪೊಲೀಸರು ದಾಳಿ

ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ, ಮದ್ಯದ ಪೌಚ್​​ಗಳನ್ನು ವಶಪಡಿಸಿಕೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

illegal-liquor-sale
ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ
author img

By

Published : Jun 3, 2021, 5:50 PM IST

ಚಾಮರಾಜನಗರ: ಪ್ರತ್ಯೇಕ ಪ್ರಕರಣದಲ್ಲಿ ಲಾಕ್​​ಡೌನ್​​ ನಡುವೆ ಮದ್ಯ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಘಟನೆ ಹನೂರು, ಕೊಳ್ಳೇಗಾಲದಲ್ಲಿ ನಡೆದಿದೆ.

ಓದಿ: ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಮನೆ ಮೇಲೆ ತಹಶೀಲ್ದಾರ್ ದಾಳಿ

ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮದ ಸ್ಟೀಫನ್ ಕುಮಾರ್ ಬಂಧಿತ ಆರೋಪಿ. ಈತ ಮಾರ್ಟಳ್ಳಿ ಗ್ರಾಮದ ಬಾರ್​​ನಲ್ಲಿ ಮದ್ಯ ಖರೀದಿಸಿ ಪಾಲಿ ಮೇಡು ಗ್ರಾಮದಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಮೇರೆಗೆ ರಾಮಾಪುರ ಪೊಲೀಸರು ದಾಳಿ ನಡೆಸಿ ಮಾಲು ಸಮೇತ ಆರೋಪಿಯನ್ನು ಬಂಧಿಸಿದ್ದಾರೆ. ‌ಈತನಿಂದ 90 ಎಂಎಲ್​ನ 96 ಪೌಚ್ ಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನು, ಕೊಳ್ಳೇಗಾಲ ತಾಲೂಕಿನ‌ ಮಧುವನಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮಸಣಶೆಟ್ಟಿ ಎಂಬ ಟ್ರ್ಯಾಕ್ಟರ್ ಚಾಲಕನನ್ನು ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈತನಿಂದ 129 ಮದ್ಯದ ಪೌಚ್​​ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಲಾಕ್​​​ಡೌನ್​ ಅವಧಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು, ನಿತ್ಯ ಕಾರ್ಯಾಚರಣೆ ಕೈಗೊಳ್ಳುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.