ETV Bharat / crime

Kashmir Encounter: ಯೋಧರ ಭರ್ಜರಿ ಬೇಟೆ.. ಜೈಷ್‌-ಎ-ಮೊಹಮ್ಮದ್‌ ಸಂಘಟನೆಯ ಮೂವರು ಉಗ್ರರು ಹತ - ನಾಗಬೀರನ್

ಜಮ್ಮು-ಕಾಶ್ಮೀರದ ಅವಂತಿಪೋರಾ ನಾಗಬೀರನ್ ಟ್ರಾಲ್‌ ಅರಣ್ಯ ಪ್ರದೇಶದಲ್ಲಿ ಉಗ್ರರು ಪ್ರತ್ಯಕ್ಷವಾಗಿದ್ದು, ಸ್ಥಳವನ್ನು ಸುತ್ತುವರೆದಿರುವ ಸೇನೆ ಹಾಗೂ ಪೊಲೀಸರು ಕೂಂಬಿಂಗ್‌ ಆರಂಭಿಸಿದ್ದಾರೆ. ಎನ್‌ಕೌಂಟರ್‌ ನಡೆಸಿ ಮೂವರು ಉಗ್ರರನ್ನು ಹೆಡೆಮುರಿ ಕಟ್ಟಿದ್ದಾರೆ.

JK: Encounter start in Tral Area
ENCOUNTER: ಜಮ್ಮು-ಕಾಶ್ಮೀರದ ನಾಗಬೀರನ್ ಅರಣ್ಯ ಪ್ರದೇಶದಲ್ಲಿ ಎನ್‌ಕೌಂಟರ್‌; ಸ್ಥಳಕ್ಕೆ ಸೇನೆ, ಪೊಲೀಸರ ದೌಡು
author img

By

Published : Aug 21, 2021, 8:21 AM IST

Updated : Aug 21, 2021, 11:38 AM IST

ಶ್ರೀನಗರ: ಜಮ್ಮು-ಕಾಶ್ಮೀರದ ಅವಂತಿಪೋರಾ ನಾಗಬೀರನ್ ಟ್ರಾಲ್‌ ಅರಣ್ಯ ಪ್ರದೇಶದಲ್ಲಿ ಬೆಳ್ಳಂಬೆಳಗ್ಗೆ ಭರ್ಜರಿ ಬೇಟೆಯಾಡಿರುವ ಸೇನೆ ಹಾಗೂ ಪೊಲೀಸರು ಜೈಷ್‌-ಎ-ಮೊಹಮ್ಮದ್‌ ಸಂಘಟನೆಗೆ ಸೇರಿದ ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ.

ಯೋಧರ ಭರ್ಜರಿ ಬೇಟೆ.. ಜೈಷ್‌-ಎ-ಮೊಹಮ್ಮದ್‌ ಸಂಘಟನೆಯ ಮೂವರು ಉಗ್ರರು ಹತ

ಟ್ರಾಲ್‌ ಅರಣ್ಯ ಪ್ರದೇಶದಲ್ಲಿ ಎನ್‌ಕೌಂಟರ್‌ ಆರಂಭವಾಗುತ್ತಿದ್ದಂತೆ ಭದ್ರತಾ ಪಡೆಗಳು ಈ ಪ್ರದೇಶವನ್ನು ಸುತ್ತಿವರಿದು ಕಾರ್ಯಾಚರಣೆ ಆರಂಭಿಸಿದ್ದವು ಎಂದು ಪೊಲೀಸ್‌ ಅಧಿಕಾರಿ ಮಾಹಿತಿ ನೀಡಿದ್ದಾರೆ.

ನಿನ್ನೆಯಷ್ಟೇ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಎನ್​ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಸೇನೆ ಹೊಡೆದುರುಳಿಸಿತ್ತು. ಕ್ರೀವ್​ ಪಾಂಪೋರ್ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್​ಕೌಂಟರ್​ ನಡೆದಿತ್ತು.

ಉಗ್ರರು ಶ್ರೀನಗರದ ಸರಾಫ್ ಕಡಲ್‌ನಲ್ಲಿ ಪೊಲೀಸ್​ ಮತ್ತು ಸಿಆರ್‌ಪಿಎಫ್ ಚೆಕ್‌ಪೋಸ್ಟ್ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದರು. ಈ ವೇಳೆ ಇಬ್ಬರು ಪೊಲೀಸರು ಮತ್ತು ಓರ್ವ ನಾಗರಿಕ ಗಾಯಗೊಂಡಿದ್ದರು.

Last Updated : Aug 21, 2021, 11:38 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.