ETV Bharat / crime

ಪತ್ನಿ ಕೊಲೆ ಮಾಡಿದ್ದ ಪಾಪಿ ಪತಿಗೆ ಜೀವಾವಧಿ ಶಿಕ್ಷೆಯ ತೀರ್ಪು ನೀಡಿದ ಕಲಬುರಗಿ ಕೋರ್ಟ್‌

ಹಾರೆಯಿಂದ ಹೊಡೆದು ಪತ್ನಿ ಸವಿತಾ ಕೊಲೆ ಪ್ರಕರಣದಲ್ಲಿ ಅಪರಾಧಿ ಪತಿ ಸಂತೋಷ ಪಾಟೀಲ್‌ಗೆ ಕಲಬುರಗಿ ಜಿಲ್ಲಾ ಕೋರ್ಟ್‌ ಜೀವಾವಧಿ ಶಿಕ್ಷೆಯ ಮಹತ್ವದ ಆದೇಶ ನೀಡಿದೆ.

Kalubaragi court verdict life sentence to husband convicted of murdering his wife
ಪತ್ನಿ ಕೊಲೆ ಮಾಡಿದ್ದ ಪಾಪಿ ಪತಿಗೆ ಜೀವಾವಧಿ ಶಿಕ್ಷೆಯ ತೀರ್ಪು ನೀಡಿದ ಕಲಬುರಗಿ ಕೋರ್ಟ್‌
author img

By

Published : Jan 16, 2022, 1:21 AM IST

ಕಲಬುರಗಿ: ತನ್ನ ಪತ್ನಿಯನ್ನು ಕಬ್ಬಿಣದ ಹಾರೆಯಿಂದ ಹೊಡೆದು ಕೊಲೆ ಮಾಡಿದ ಅಪರಾಧಿ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ.

ಅಫಜಲಪುರ ತಾಲೂಕಿನ ರೇವೂರ್ ಗ್ರಾಮದ ಸಂತೋಷ ಪಾಟೀಲ್ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಕಲಬುರ್ಗಿಯ ಹೀರಾಪುರದಲ್ಲಿ ಬಾಡಿಗೆಗಿದ್ದ ಸಂತೋಷ ಹಾಗೂ ಆತನ ಪತ್ನಿ ನಡುವೆ ಗಲಾಟೆ ನಡೆದು ಬಾಡಿಗೆ ಮನೆಯಲ್ಲಿಯೇ ಪತ್ನಿ ಸವಿತಾಳಿಗೆ ಹಾರೆಯಿಂದ ಹೊಡೆದು ಕೊಲೆ ಮಾಡಿದ್ದ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯ ಪಿಐ ವಾಜೀದ್ ಪಟೇಲ್ ತನಿಖೆ ಮಾಡಿ ನ್ಯಾಯಾಲಯಕ್ಕೆ ದೋಷಾರೋಪಣೆ ವರದಿ ಸಲ್ಲಿಸಿದ್ದರು.

ಈ ಕುರಿತು ವಿಚಾರಣೆ ಮಾಡಿದ 3ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಗದೀಶ್ ವಿ.ಎನ್ ಅವರು, ಕಲಂ 302, 504ರ ಅಡಿಯಲ್ಲಿ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಅಲ್ಲದೆ ಮೃತಳ ಮಕ್ಕಳ ಪರಿಹಾರಕ್ಕಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಲು ಸೂಚಿಸಿದ್ದಾರೆ.
ಸರ್ಕಾರಿ ಅಭಿಯೋಜಕರಾಗಿ ಗುರುಲಿಂಗಪ್ಪ ಶ್ರೀಮಂತ ತೇಲಿ ವಾದ ಮಂಡಿಸಿದ್ದರು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.