ಬೆಂಗಳೂರು: ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಉಪಕಾರ್ ಲೇಔಟ್ ನಲ್ಲಿ ಮಳೆ ಸುರಿದ ಪರಿಣಾಮ ನೀರು ನುಗ್ಗಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರಕ್ಷತಾ ಕ್ರಮ ಅನುಸರಿಸದ ಗುತ್ತಿಗೆದಾರರು ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಉಲ್ಲಾಳದ ಉಪಕಾರ್ ಲೇಔಟ್ ಬಿಡಿಎ ರಸ್ತೆಯಲ್ಲಿ ಕಾರ್ಮಿಕರು ಕೆಲಸ ಮಾಡುವಾಗ ಪೈಪ್ ನಲ್ಲಿ ನೀರು ನುಗ್ಗಿದೆ. ಈ ವೇಳೆ ಇದರಿಂದ ಹೊರಬರಲಾಗದೆ ಉಸಿರುಗಟ್ಟಿ ಬಿಹಾರ ಮೂಲದ ದೇವ್ ಬಾತ್ ಹಾಗೂ ಉತ್ತರಪ್ರದೇಶದ ಅಂಕಿತ್ ಕುಮಾರ್ ಎಂಬ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಘಟನೆ ಸಂಬಂಧ ಪ್ರಾಜೆಕ್ಟ್ ಮ್ಯಾನೇಜರ್ ಶಿವಕುಮಾರ್, ಸೈಟ್ ಇಂಜಿನಿಯರ್ ಹರೀಶ್ ರೆಡ್ಡಿ, ಹೆಚ್ ಆರ್ ಮ್ಯಾನೇಜರ್ ನರಸಿಂಹರಾಜು ಹಾಗೂ ಕಾರ್ಮಿಕರನ್ನು ಸರಬರಾಜು ಮಾಡುವ ಮನೋಜ್ ಯಾದವ್ ಎಂಬುವರನ್ನು ಬಂಧಿಸಿ, ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ.
ಇದನ್ನೂ ಓದಿ.. ಬೆಂಗಳೂರಲ್ಲಿ ವರುಣಾರ್ಭಟಕ್ಕೆ ಇಬ್ಬರು ಕಾರ್ಮಿಕರು ಬಲಿ; 200ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು