ಲಖನೌ(ಉತ್ತರ ಪ್ರದೇಶ): ಸಬಲ್‌ಗಢದ ಡಾ ಶಕುಂತಲಾ ಮಿಶ್ರಾ ರಾಷ್ಟ್ರೀಯ ಪುನರ್ವಸತಿ ವಿಶ್ವವಿದ್ಯಾಲಯದ ಎಲ್‌ಎಲ್‌ಬಿ ಅಂತಿಮ ವರ್ಷದ ವಿದ್ಯಾರ್ಥಿನಿಯೊಬ್ಬರು ಶನಿವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತ ವಿದ್ಯಾರ್ಥಿನಿಯನ್ನು ರಾಮಕೃಷ್ಣ ದ್ವಿವೇದಿ ಅವರ ಪುತ್ರಿ ಕೋಮಲ್ ದ್ವಿವೇದಿ ಎಂದು ಪೊಲೀಸರು ಗುರುತಿಸಿದ್ದಾರೆ. ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಆಕೆಯ ಸ್ನೇಹಿತರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಪೊಲೀಸರು ಬಂದು ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ.
ಪೊಲೀಸರು ಕೃಷ್ಣನಗರದ ಸ್ನೇಹನಗರದಲ್ಲಿರುವ ಸಾಹ್ನಿ ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿನಿಯ ಕೊಠಡಿಯಿಂದ ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ನಂತರ ಮೃತರ ಸಂಬಂಧಿಕರಿಗೆ ಮಾಹಿತಿ ನೀಡಲಾಗಿದೆ. ಶುಕ್ರವಾರ ರಾತ್ರಿ ಕೋಮಲ್ ನಿದ್ರೆಗೆ ಜಾರಿದ್ದರು ಎಂದು ಸ್ನೇಹಿತರೊಬ್ಬರು ಪೊಲೀಸರಿಗೆ ತಿಳಿಸಿದ್ದಾರೆ. ಶನಿವಾರ ಬೆಳಗ್ಗೆ ಅವರ ಕೋಣೆಯ ಬಾಗಿಲು ತೆರೆಯದೇ ಇದ್ದಾಗ ಆಕೆ ಮಲಗಿರಬೇಕೆಂದು ಸಹಪಾಠಿಗಳು ಭಾವಿಸಿದ್ದರು.
ಘಟನೆಯ ಕುರಿತು ತನಿಖೆ ಆರಂಭಿಸಲಾಗಿದ್ದು, ಮೃತರ ಸಂಬಂಧಿಕರು ಇನ್ನೂ ದೂರು ದಾಖಲಿಸಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೊಲೀಸರು ಯುವತಿಯ ಸೂಸೈಡ್ ನೋಟ್ ಅನ್ನು ವಶಪಡಿಸಿಕೊಂಡಿಲ್ಲ. ಆದರೆ ಸಾವಿಗೆ ಕಾರಣವನ್ನು ತಿಳಿಯಲು ಪೊಲೀಸರು ಕೋಮಲ್ ಅವರ ಸ್ನೇಹಿತರನ್ನು ವಿಚಾರಿಸಿದ್ದಾರೆ. ಆಕೆಯ ಬ್ಯಾಕ್‌ಲಾಗ್ ಪೇಪರ್‌ಗಳ ಫಲಿತಾಂಶದ ಬಗ್ಗೆ ಕೋಮಲ್ ಬೇಸರಗೊಂಡಿದ್ದಳು ಅವಳ ತಂದೆ ಹೇಳಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಜಮೀನಿನಿಂದ ಕಬ್ಬು ಕದ್ದಿದ್ದಕ್ಕಾಗಿ ವ್ಯಕ್ತಿಯ ಕೊಲೆ; ಇಬ್ಬರು ಆರೋಪಿಗಳ ಬಂಧನ