ETV Bharat / crime

ವರದಕ್ಷಿಣೆ ಕಿರುಕುಳ ಕೇಸ್‌ ಆರೋಪಿಯಿಂದ ಲಂಚ: ಮಡಿವಾಳ ಠಾಣೆ ಇನ್ಸ್‌ಪೆಕ್ಟರ್‌ ಸಸ್ಪೆಂಡ್‌

author img

By

Published : Jan 3, 2022, 3:25 PM IST

ವರದಕ್ಷಿಣೆ ಕಿರುಕುಳ ಪ್ರಕರಣದ ಆರೋಪಿಯಿಂದ ಲಂಚ ಪಡೆದ ಗಂಭೀರ ಆರೋಪದಲ್ಲಿ ಬೆಂಗಳೂರಿನ ಮಡಿವಾಳ ಪೊಲೀಸ್‌ ಠಾಣೆ ಇನ್ಸ್‌ಪೆಕ್ಟರ್‌ ಸುನೀಲ್‌ ನಾಯಕ್‌ ಅವರನ್ನು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅಮಾನತು ಮಾಡಿದ್ದಾರೆ.

Bribery case: Madiwala inSpector suspended In bangalore
ಲಂಚ ಪಡೆದ ಆರೋಪ; ಮಡಿವಾಳ ಇನ್ಸ್‌ಪೆಕ್ಟರ್‌ ಅಮಾನತು

ಬೆಂಗಳೂರು: ಲಂಚ ಪಡೆದ ಆರೋಪಡಿ ಮಡಿವಾಳ ಠಾಣೆ ಇನ್ಸ್‌ಪೆಕ್ಟರ್ ಸುನೀಲ್ ನಾಯಕ್ ಅವರನ್ನು ಅಮಾನತು ಮಾಡಲಾಗಿದೆ.

ವರದಕ್ಷಿಣೆ ಕಿರುಕುಳ ಸಂಬಂಧ ಆರೋಪಿ ಅಜಯ್ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ್ದ ಪೊಲೀಸರು ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಸಿದ್ದರು. ಪ್ರಕರಣದಲ್ಲಿ ಕೋರ್ಟ್‌ಗೆ ಹಾಜರಾಗದ ಅಜಯ್ ವಿರುದ್ಧ ವಾರೆಂಟ್ ಜಾರಿಯಾಗಿತ್ತು. ಈ ಹಿನ್ನೆಲೆಯಲ್ಲಿ ಮುಂಬೈಯಿಂದ ಆರೋಪಿ ಅಜಯ್‌ನನ್ನು ವಾರೆಂಟ್ ಮೇಲೆ ಕರೆತಂದಿದ್ದ ಪೊಲೀಸರು ಹಣ ಪಡೆದು ಬಿಟ್ಟು ಕಳಿಸಿದ್ದರು.

ಆದರೆ, ಆರೋಪಿ ಪೊಲೀಸರಿಗೆ ಲಂಚದ ರೂಪದಲ್ಲಿ ಹಣ ಕೊಡುವ ವಿಡಿಯೋ ಮಾಡಿ ಮೇಲಧಿಕಾರಿಗಳಿಗೆ ಕಳುಹಿಸಿದ್ದಾನೆ. ಈ ವಿಡಿಯೋ ಆಧರಿಸಿ ಡಿಸಿಪಿ ಶ್ರೀನಾಥ್ ಜೋಷಿ ಅವರಿಗೆ ಕಮಿಷನರ್ ಕಮಲ್ ಪಂತ್ ವರದಿ ಕೇಳಿದ್ದರು‌. ಡಿಸಿಪಿ ವರದಿ ಆಧರಿಸಿ ಕಮಲ್ ಪಂತ್ ಅವರು ಇನ್ಸ್‌ಪೆಕ್ಟರ್ ಸುನೀಲ್ ನಾಯಕ್‌ರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಆಸ್ತಿ ವಿವಾದ: ತಂದೆ, ತಮ್ಮನಿಂದಲೇ ಅಣ್ಣನ ಮನೆಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನ ಆರೋಪ

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.