ETV Bharat / crime

ಉದ್ಯಮಿಯ ಫೋನ್ ಹ್ಯಾಕ್ ಮಾಡಿ ಬ್ಯಾಂಕ್ ಖಾತೆಯಿಂದ ಹಣ ದೋಚಿದ ವಂಚಕರು - ವಾಗ್ಲೆ ಎಸ್ಟೇಟ್ ಪೊಲೀಸ್ ಠಾಣೆ

ಮಹಾರಾಷ್ಟ್ರದ ಥಾಣೆ ನಗರದ ಉದ್ಯಮಿಯೊಬ್ಬರ ಮೊಬೈಲ್ ಫೋನ್ ಹ್ಯಾಕ್ ಮಾಡಿರುವ ಸೈಬರ್ ವಂಚಕರು ಖಾತೆಯಿಂದ 99.50 ಲಕ್ಷ ರೂ.ಗಳನ್ನು ದೋಚಿದ್ದಾರೆ.

Businessmans phone hacked
ಉದ್ಯಮಿಯ ಫೋನ್ ಹ್ಯಾಕ್
author img

By

Published : Nov 10, 2022, 3:24 PM IST

Updated : Nov 10, 2022, 5:40 PM IST

ಥಾಣೆ(ಮಹಾರಾಷ್ಟ್ರ): ಮಹಾರಾಷ್ಟ್ರದ ಥಾಣೆ ನಗರದ ಉದ್ಯಮಿಯೊಬ್ಬರ ಮೊಬೈಲ್ ಫೋನ್ ಹ್ಯಾಕ್ ಮಾಡಿರುವ ಸೈಬರ್ ವಂಚಕರು ಖಾತೆಯಿಂದ 99.50 ಲಕ್ಷ ರೂ.ಗಳನ್ನು ದೋಚಿದ್ದಾರೆ ಎಂದು ದೂರು ದಾಖಲಾಗಿದೆ. ಈ ವಿಷಯವನ್ನು ಠಾಣೆಯ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ

ನವೆಂಬರ್ 6-7 ನಡುವೆ ಈ ಹ್ಯಾಕಿಂಗ್ ನಡೆದಿದೆ ಎನ್ನಲಾಗಿದೆ. ಉದ್ಯಮಿಯ ಬ್ಯಾಂಕ್ ಖಾತೆಗಳಿಂದ ಹಣವನ್ನು ನೆಟ್ ಬ್ಯಾಂಕಿಂಗ್ ಮೂಲಕ ಇತರ ಖಾತೆಗಳಿಗೆ ವರ್ಗಾಯಿಸಲಾಗಿದೆ ಎಂದು ದೂರು ನೀಡಲಾಗಿದೆ ಎಂದು ವಾಗ್ಲೆ ಎಸ್ಟೇಟ್ ಪೊಲೀಸ್ ಠಾಣೆಯ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಬಂಧನೆಗಳ ಅಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಕೈಗೊಂಡಿದ್ದಾರೆ. ಹ್ಯಾಕ್​ ಮಾಡಲಾಗಿದೆಯಾ, ಯಾವ ರೀತಿ ಸೈಬರ್​ ಕಳ್ಳರು ಈ ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ ಎಂಬ ಬಗ್ಗೆ ತನಿಖೆ ಕೂಗೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ:ಸರ್ಕಾರಿ ಕಚೇರಿಯಲ್ಲೇ ಲಂಚ ಸ್ವೀಕಾರ ಆರೋಪ: ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

Last Updated : Nov 10, 2022, 5:40 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.