ಕಲಬುರಗಿ: ಮೆಕ್ಕೆಜೋಳದ ಹೊಲದಲ್ಲಿ ಬೆಳೆದಿದ್ದ 330 ಕೆಜಿ ತೂಕದ ಗಾಂಜಾ ಗಿಡಗಳನ್ನು ಪೊಲೀಸರು ವಶಕ್ಕೆ ಪಡೆದು, ಓರ್ವನನ್ನು ಬಂಧಿಸಿರುವ ಘಟನೆ ಚಿಂಚೋಳಿ ತಾಲೂಕಿನ ಬೋನಸಪುರ ಗ್ರಾಮದಲ್ಲಿ ನಡೆದಿದೆ.
ಓದಿ: ಡಿಸಿಸಿ ಬ್ಯಾಂಕ್ ನಿರ್ದೇಶಕನ ಪತ್ನಿ ಆತ್ಮಹತ್ಯೆ
ಗ್ರಾಮದ ದೇವಪ್ಪ ಬಂಧಿತ ಆರೋಪಿಯಾಗಿದ್ದು, ಈತ ಮೆಕ್ಕೆಜೋಳದ ಹೊಲದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿರುವ ಬಗ್ಗೆ ಮಾಹಿತಿ ಕಲೆಹಾಕಿದ ಚಿಂಚೋಳಿ ಡಿವೈಎಸ್‌ಪಿ ಇ.ಎಸ್.ವೀರಭದ್ರಯ್ಯ ನೇತೃತ್ವದಲ್ಲಿ ದಾಳಿ ನಡೆಸಿ 7 ಲಕ್ಷ ರೂಪಾಯಿ ಮೌಲ್ಯದ ಗಾಂಜಾ ಗಿಡ ಜಪ್ತಿ ಮಾಡಲಾಗಿದೆ.
ಈ ಕುರಿತು ಕೊಂಚವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.