ಮುಂಬೈ (ಮಹಾರಾಷ್ಟ್ರ): ಸೆಂಟ್ರಲ್ ಮುಂಬೈನ ಲೋವರ್ ಪರೇಲ್ ಪ್ರದೇಶದಲ್ಲಿ ಆರು ಮಂದಿ ಆರೋಪಿಗಳು 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಬಾಲಕಿಯ ಸ್ನೇಹಿತನೂ ಸೇರಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇವರಲ್ಲಿ ಮೂವರು ಅಪ್ರಾಪ್ತರೆಂದು ತಿಳಿದುಬಂದಿದೆ.
ಆರೋಪಿಗಳಲ್ಲಿ ಒಬ್ಬ ಸಂತ್ರಸ್ತೆಯ ಸ್ನೇಹಿತ. ಈ ಇಬ್ಬರೂ ಸೇರಿ ಸ್ನೇಹಿತನ ಹುಟ್ಟುಹಬ್ಬ ಆಚರಿಸಲು ಚಾಲ್ ಎಂಬಲ್ಲಿಗೆ ಹೋಗಿದ್ದರು. ಇದೇ ಪ್ರದೇಶಕ್ಕೆ ಇತರೆ ಐವರು ಆರೋಪಿಗಳೂ ಬಂದಿದ್ದರು. ರಾತ್ರಿ ವೇಳೆ ಚಾಲ್‌ನ ನಿವಾಸಿಗಳು ಬಾಲಕಿಯ ಕೂಗು ಕೇಳಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಆಗಮಿಸಿದ ಎನ್ ಎಂ ಜೋಶಿ ಮಾರ್ಗ ಪೊಲೀಸ್ ಠಾಣೆಯ ಸಿಬ್ಬಂದಿ ಬಾಲಕಿ ಮತ್ತು ಆರೋಪಿಯನ್ನು ಪತ್ತೆ ಮಾಡಿದ್ದಾರೆ. ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ.
ಮೂವರು ಅಪ್ರಾಪ್ತ ಆರೋಪಿಗಳನ್ನು ವಶಕ್ಕೆ ಪಡೆದು ಡೋಂಗ್ರಿಯಲ್ಲಿರುವ ಬಾಲಾಪರಾಧಿ ಕೇಂದ್ರಕ್ಕೆ ಕಳುಹಿಸಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ: ಮನೆಯ ಕಾರು ಚಾಲಕನಿಂದಲೇ ವೈದ್ಯೆ ಮೇಲೆ ಲೈಂಗಿಕ ದೌರ್ಜನ್ಯ.. ಬೆಂಗಳೂರಲ್ಲಿ ದುಷ್ಕೃತ್ಯ