ETV Bharat / crime

ಯುವತಿಯ ಮೊಬೈಲ್ ಕಸಿದು, ಕಾಲಲ್ಲಿ ಒದ್ದು ಪರಾರಿಯಾಗಿದ್ದ ಆರೋಪಿಗಳ ಬಂಧನ - ಮಾಗಡಿ ರಸ್ತೆಯ ಅಂಜನಾನಗರ

ಮಾಗಡಿ ರಸ್ತೆಯ ಅಂಜನಾನಗರ ಬಳಿ ಯುವತಿಯ ವಿವೋ ಮೊಬೈಲ್ ಕಸಿದುಕೊಂಡು ಕಾಲಲ್ಲಿ ಒದ್ದು ಪರಾರಿಯಾಗಿದ್ದ ಆರೋಪಿಗಳ ವಿರುದ್ಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

mobile theft
mobile theft
author img

By

Published : Apr 6, 2021, 6:11 PM IST

ಬೆಂಗಳೂರು: ಬ್ಯಾಡರಹಳ್ಳಿ ಪೊಲೀಸರು ಕಾರ್ಯಾಚರಣೆ ನೆಡಸಿ ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.

ಮಾಗಡಿ ರಸ್ತೆಯ ಅಂಜನಾನಗರ ಬಳಿ ಯುವತಿಯ ವಿವೋ ಮೊಬೈಲ್ ಕಸಿದುಕೊಂಡು ಕಾಲಲ್ಲಿ ಒದ್ದು ಪರಾರಿಯಾಗಿದ್ದ ಆರೋಪಿಗಳ ವಿರುದ್ಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಸದ್ಯ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರಿಂದ 4.5 ಲಕ್ಷ ರೂ. ಮೌಲ್ಯದ 3 ದ್ವಿಚಕ್ರ ವಾಹನ, 25 ವಿವಿಧ ಕಂಪನಿಯ ಮೊಬೈಲ್ ವಶಕ್ಕೆ ಪಡೆಯಲಾಗಿದೆ.

ಕಿರಣ್ ಮತ್ತು ನಿಖಿಲ್ ಎಂಬ ಆರೋಪಿಗಳ ಬಂಧನದಿಂದ ಬ್ಯಾಡರಹಳ್ಳಿ, ರಾಜಗೋಪಾಲನಗರ, ಎಲೆಕ್ಟ್ರಾನಿಕ್ ಸಿಟಿ ಠಾಣಾ ವ್ಯಾಪ್ತಿಗಳಲ್ಲಿ ಕಳವು ಮಾಡಿದ್ದ ಅನೇಕ ಪ್ರಕರಣಗಳು ಬೆಳಕಿಗೆ ಬಂದಿವೆ. ಸದ್ಯ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.