ಅಬುಜಾ : ನೈಜೀರಿಯಾದ ಕ್ಯಾನೊ ರಾಜ್ಯದಲ್ಲಿ ನಿನ್ನೆ ನಡೆದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ್ದು, 41 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕುನಾರ್ ದುಮಾವ ಎಂಬ ಗ್ರಾಮದಲ್ಲಿ ಟ್ರಕ್ ಮತ್ತು ಎರಡು ಕಾರುಗಳು ಒಂದಕ್ಕೊಂದು ಡಿಕ್ಕಿ ಹೊಡೆದ ಪರಿಣಾಮ ದುರಂತ ಸಂಭವಿಸಿದೆ. ಈ ಮೂರು ವಾಹನಗಳಲ್ಲಿ ಒಂದು ವಾಹನದ ಬ್ರೇಕ್ ಫೇಲ್ ಆಗಿ, ಇತರ ಎರಡು ಗಾಡಿಗಳಿಗೆ ಗುದ್ದಿದೆ.
ಇದನ್ನೂ ಓದಿ: ಹುಟ್ಟುಹಬ್ಬ ಆಚರಿಸಲು ಹೋಗುತ್ತಿದ್ದ ವೇಳೆ ರಸ್ತೆ ಅಪಘಾತ: ಬಾಲಕಿ ದಾರುಣ ಸಾವು, ಇಬ್ಬರಿಗೆ ಗಾಯ
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.