ETV Bharat / crime

ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಕಾರ್ಮಿಕ ಸಾವು - Tamil Nadu blast

ತಮಿಳುನಾಡಿನ ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾನೆ.

One dead in firecracker blast at Sivakasi
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ
author img

By

Published : Feb 13, 2021, 3:12 PM IST

ವಿರುಧುನಗರ್ (ತಮಿಳುನಾಡು): ನಿನ್ನೆ ನಡೆದ ದುರಂತದ ಬೆನ್ನಲ್ಲೇ ತಮಿಳುನಾಡಿನ ವಿರುಧುನಗರ್​​ನ ಮತ್ತೊಂದು ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಓರ್ವ ಕಾರ್ಮಿಕ ಮೃತಪಟ್ಟಿದ್ದಾನೆ.

ವಿರುಧುನಗರ್ ಜಿಲ್ಲೆಯಲ್ಲಿರುವ ಶಿವಕಾಶಿಯ ಪಟ್ಟಣದ ಕಕ್ಕಿವಾಡನ್‌ಪಾಟ್ಟಿಯಲ್ಲಿನ ಕೃಷ್ಣಸ್ವಾಮಿ ಪಟಾಕಿ ಕಾರ್ಖಾನೆಯಲ್ಲಿ ಅವಘಡ ನಡೆದಿದೆ. ಕಾರ್ಖಾನೆಯ ಕೋಣೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, ಅಲ್ಲಿದ್ದ ಕಾರ್ಮಿಕನೋರ್ವ ಗಂಭೀರವಾಗಿ ಗಾಯಗೊಂಡಿದ್ದನು. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಿಸದೆ ಆತ ಸಾವನ್ನಪ್ಪಿದ್ದಾನೆ.

ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ

ಇದನ್ನೂ ಓದಿ: ತಮಿಳುನಾಡು ಪಟಾಕಿ ದುರಂತ: ಮೃತರ ಸಂಖ್ಯೆ 19ಕ್ಕೆ ಏರಿಕೆ

ಪಟಾಕಿಗಳ ತಯಾರಿಕೆಯಲ್ಲಿ 'ಮಿನಿ ಜಪಾನ್'​ ಎಂದೇ ಪ್ರಸಿದ್ಧಿಯಾಗಿರುವ ಶಿವಕಾಶಿಯಲ್ಲಿ ಪದೇ ಪದೇ ಇಂಥ ಘಟನೆಗಳು ನಡೆಯುತ್ತಲೇ ಇರುತ್ತವೆ.

ನಿನ್ನೆಯಷ್ಟೇ ವಿರುಧುನಗರದ ಸತೂರ್​ ಪ್ರದೇಶದಲ್ಲಿನ ಮರಿಯಮ್ಮಲ್ ಪಟಾಕಿ ಕಾರ್ಖಾನೆಯಲ್ಲಿ ಉಂಟಾದ ಸ್ಫೋಟದಲ್ಲಿ 19 ಮಂದಿ ಕಾರ್ಮಿಕರು ಬಲಿಯಾಗಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.