ಹೊಸಕೋಟೆ: ದುಷ್ಕರ್ಮಿಗಳು ವ್ಯಕ್ತಿಯೋರ್ವನ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅನುಗೊಂಡನಹಳ್ಳಿಯಲ್ಲಿ ನಡೆದಿದೆ.
ಮಹದೇವಪುರದ ವರ್ತೂರು ಸಮೀಪದ ಪಣತ್ತೂರು ದಿನ್ನೆ ನಿವಾಸಿ ಪ್ರಕಾಶ್ (40) ಕೊಲೆಯಾಗಿರುವ ದುರ್ದೈವಿಯಾಗಿದ್ದು, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೊಲೆ ಮಾಡಿ ನಿರ್ಜನ ಪ್ರದೇಶದಲ್ಲಿ ಮೃತ ದೇಹವನ್ನು ಎಸೆದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಅನುಗೊಂಡಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಲೆ ನಡೆದಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.