ಬೆಂಗಳೂರು: ವಿಜಯನಗರ ಉಪವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿ ಮನೆಗಳ್ಳತನ ಮತ್ತು ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ.
ಮನೆ ಕಳ್ಳತನದ ದೂರುಗಳನ್ನು ಕೈಗೆತ್ತಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಪ್ರಶಾಂತ್ (21) ಅವರಿಂದ 17 ಗ್ರಾಂ. ಚಿನ್ನ ಹಾಗೂ 15 ಸಾವಿರ ನಗದು ವಶಕ್ಕೆ ಪಡೆಯುಲಾಗಿದೆ.
ವಿಚಾರಣೆಗೆ ಒಳಪಡಿಸಿದಾಗ ಮಾಗಡಿ ರಸ್ತೆ, ಬ್ಯಾಡರಹಳ್ಳಿ, ಕೆ.ಪಿ ಅಗ್ರಹಾರದಲ್ಲಿ ಒಡವೆ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಜತೆಗೆ ಮಹಾಲಕ್ಷ್ಮಿ ಲೇಔಟ್, ಸುಬ್ರಹ್ಮಣ್ಯನಗರ ದ್ವಿಚಕ್ರ ವಾಹನ ಕಳವು ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ.
ಆರೋಪಿ ಬಂಧನದಿಂದ 2 ಮನೆ ಕಳವು ಮತ್ತು 2 ದ್ವಿಚಕ್ರ ವಾಹನ ಕಳವು ಪ್ರಕರಣಗಳಿಂದ 4.85 ಲಕ್ಷ ಬೆಲೆಯ 77 ಗ್ರಾಂ. ಚಿನ್ನ ಮತ್ತು 2 ಬೈಕ್ ಕಳವು ಮಾಡಿದ್ದು ತಿಳಿದುಬಂದಿದೆ. ಅವೆಲ್ಲವನ್ನೂ ವಶಕ್ಕೆ ಪಡೆಯಲಾಗಿದೆ.