ಮುಂಬೈ: ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಪರಿಣಾಮ ಪೀಠೋಪಕರಣಗಳ ಗೋದಾಮು ಹೊತ್ತಿ ಉರಿದ ಘಟನೆ ಪುಣೆಯ ಯೆವ್ಲೆವಾಡಿಯಲ್ಲಿ ನಡೆದಿದ್ದು, ಐವರು ಕಾರ್ಮಿಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ಬೆಳಗ್ಗೆ 5.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಸುದ್ದಿ ತಿಳಿದು ಸ್ಥಳಕ್ಕೆ ಬಂದ 8 ಅಗ್ನಿಶಾಮಕ ವಾಹನಗಳು ಹಾಗೂ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ.
ಬೆಂಕಿ ಅವಘಡದಿಂದ ಸುಮಾರು 15 ಲಕ್ಷ ರೂಪಾಯಿ ನಷ್ಟವಾಗಿದೆ. ಈ ಗೋಡೌನ್ ಎಜಾಜ್ ಸಿದ್ದಿಕಿ ಎಂಬುವರಿಗೆ ಸೇರಿದ್ದು ಎನ್ನಲಾಗಿದೆ. ಬಾಡಿಗೆಗೆ ಗೋಡೌನ್ ಪಡೆದು ಪೀಠೋಪಕರಣಗಳನ್ನು ತುಂಬಿಸಿದ್ದರು. ಬೆಂಕಿ ಅವಘಡದಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಅಗ್ನಿಶಾಮಕ ದಳದ ಮುಖ್ಯಸ್ಥ ಸಮೀರ್ ಶೇಖ್ ಮಾಹಿತಿ ನೀಡಿದ್ದಾರೆ.