ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರ ಸೋದರಳಿಯ ಭೂಪಿಂದರ್ ಭಗತ್ ಸಿಂಗ್ ಹನಿ ಅವರನ್ನು ಮೈನಿಂಗ್ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಭೂಪಿಂದರ್ ಸಿಂಗ್ ಹನಿ ಅವರನ್ನು ನಿನ್ನೆ ಸುಮಾರು 8 ಗಂಟೆಗಳ ಕಾಲ ವಿಚಾರಣೆಗೊಳಪಡಿಸಿದ ನಂತರ ಬಂಧಿಸಲಾಗಿದೆ.
ಫೆ. 20 ರಂದು ಪಂಜಾಬ್‌ನಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿರುವುದರಿಂದ ರಾಜಕೀಯ ವಲಯದಲ್ಲಿ ಇದು ಭಾರಿ ಸುದ್ದಿಗೆ ಗ್ರಾಸವಾಗಿದೆ. ಭೂಪಿಂದರ್ ಸಿಂಗ್ ಹನಿ ಬಂಧನ ವಿಚಾರವನ್ನು ಇಟ್ಟುಕೊಂಡು ಆಡಳಿತ ಪಕ್ಷ ಕಾಂಗ್ರೆಸ್ ವಿರುದ್ಧ ವಿಪಕ್ಷಗಳ ವಾಕ್ಸಮರ ನಡೆಸುವ ಸಾಧ್ಯತೆ ಇದೆ.
ಒಬೇದ್ ಮೈನಿಂಗ್ ಪ್ರಕರಣದಲ್ಲಿ ಇಡಿ ಭೂಪಿಂದರ್ ಸಿಂಗ್ ಹನಿ ಅವರ ಮನೆ, ಕಚೇರಿ ಸೇರಿ ಹಲವಾರು ಸ್ಥಳಗಳ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ನಗದು, ಚಿನ್ನ ಮತ್ತು ದುಬಾರಿ ಬೆಲೆಯ ವಾಚ್ ವಶಪಡಿಸಿಕೊಳ್ಳಲಾಗಿತ್ತು.
ಸಿಂಗ್ ಅವರನ್ನು ತಡರಾತ್ರಿ ಜಲಂಧರ್‌ನ ಸಿವಿಲ್ ಆಸ್ಪತ್ರೆಗೆ ಕರೆದೊಯ್ದು ಆರೋಗ್ಯ ತಪಾಸಣೆ ನಡೆಸಿದ್ದಾರೆ. ಇಂದು ಮೊಹಾಲಿಯ ಸಿಬಿಐ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.