ETV Bharat / crime

ನೆರವಿನ ನೆಪದಲ್ಲಿ ಮಂಗಳೂರಲ್ಲಿ ಬಾಲಕಿ ಮೇಲೆ ಅತ್ಯಾಚಾರ: ರಿಕ್ಷಾ ಚಾಲಕನ ವಿರುದ್ಧ ಕೇಸ್​ - accused rickshaw driver is Ajmal

ಜೂನ್ 16 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಾಲಕಿಯನ್ನು ಬಬ್ಲು ಎಂಬುವರ ಮನೆಗೆ ಕರೆದುಕೊಂಡು ಹೋಗಿ ಬಿಟ್ಟಿದ್ದಾನೆ. ಜೂನ್ 17 ರಂದು ಹನೀಫ್ ಎಂಬುವನ ರೂಂ ಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿಗೆ ರಾತ್ರಿ 12 ಗಂಟೆಗೆ ಬಂದ ಆರೋಪಿ ರಿಕ್ಷಾ ಚಾಲಕ ಅಜ್ಮಲ್ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ.

rape-on-a-young-girl-
ಪ್ರಕರಣ ದಾಖಲು
author img

By

Published : Jun 19, 2021, 10:45 PM IST

ಮಂಗಳೂರು: ಅಪ್ರಾಪ್ತ ಬಾಲಕಿಯೊಬ್ಬಳಿಗೆ ನೆರವು ನೀಡುವ ಸೋಗಿನಲ್ಲಿ ರಿಕ್ಷಾ ಚಾಲಕನೊಬ್ಬ ಅತ್ಯಾಚಾರ ಮಾಡಿದ ಘಟನೆ ನಗರದಲ್ಲಿ ನಡೆದಿದೆ. ಮಂಗಳೂರು ಮಹಿಳಾ ಪೊಲೀಸ್ ಠಾಣೆ ಉಪನಿರೀಕ್ಷಕರಾದ ರೋಸಮ್ಮ ಪಿಪಿ ಅವರು ಅಪ್ರಾಪ್ತ ಬಾಲಕಿಯನ್ನು ಆಪ್ತ ಸಮಾಲೋಚನೆಗೆ ಒಳಪಡಿಸಿದಾಗ ಈ ವಿಚಾರ ಬೆಳಕಿಗೆ ಬಂದಿದ್ದು ಪ್ರಕರಣ ದಾಖಲಾಗಿದೆ.

rape-on-a-young-girl-
ಪ್ರಕರಣ ದಾಖಲು

ಓದಿ: 20 ದಿನಗಳಲ್ಲಿ ನಿರ್ಮಾಣವಾದ ಯಲಹಂಕ ಕೋವಿಡ್‌ ಆಸ್ಪತ್ರೆ ಉದ್ಘಾಟಿಸಿರುವುದು ಸಂತಸ : ಸಿಎಂ ಬಿಎಸ್​​ವೈ

ಬಾಲಕಿ ಅನಾರೋಗ್ಯ ನಿಮಿತ್ತ ಜೂನ್ 12 ರಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದಳು. ಮರುದಿನ ಆಕೆ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಹೋಗಬೇಕಾಗಿತ್ತು. ಈ ಸಂದರ್ಭದಲ್ಲಿ ವೆನ್ಲಾಕ್ ಆಸ್ಪತ್ರೆ ಬಳಿ ಇರುವ ರೈಲ್ವೆ ಸ್ಟೇಷನ್ ಬಳಿ ಇದ್ದ ಅಜ್ಮಲ್ ಎಂಬಾತನ ರಿಕ್ಷಾದಲ್ಲಿ ತೆರಳಿದ್ದಳು. ಈ ಸಂದರ್ಭದಲ್ಲಿ ರಿಕ್ಷಾ ಚಾಲಕ ಬಾಲಕಿಯ ಫೋನ್ ನಂಬರ್ ಪಡೆದುಕೊಂಡಿದ್ದ. ಜೂನ್ 13 ರಂದು ಈತ ಆಸ್ಪತ್ರೆಗೆ ಹೋಗಿ ಹಣ್ಣು ಹಂಪಲು ನೀಡಿದ್ದ.

ಜೂನ್ 16 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಾಲಕಿಯನ್ನು ಬಬ್ಲು ಎಂಬುವರ ಮನೆಗೆ ಕರೆದುಕೊಂಡು ಹೋಗಿದ್ದಾನೆ. ಜೂನ್ 17 ರಂದು ಹನೀಫ್ ಎಂಬುವನ ರೂಂ ಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿಗೆ ರಾತ್ರಿ 12 ಗಂಟೆಗೆ ಬಂದ ಆರೋಪಿ ರಿಕ್ಷಾ ಚಾಲಕ ಅಜ್ಮಲ್ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ.

ಮಂಗಳೂರು ಮಹಿಳಾ ಪೊಲೀಸ್ ಠಾಣೆ ಉಪನಿರೀಕ್ಷಕರಾದ ರೋಸಮ್ಮ ಪಿಪಿ ಅವರು ಅಪ್ರಾಪ್ತ ಬಾಲಕಿಯನ್ನು ಆಪ್ತ ಸಮಾಲೋಚನೆಗೆ ಒಳಪಡಿಸಿದಾಗ ಈ ವಿಚಾರ ಬೆಳಕಿಗೆ ಬಂದಿದ್ದು, ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.