ಚಿಕ್ಕಮಗಳೂರಲ್ಲಿ SSLC ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ: ಆಕೆಯ ಪ್ರಿಯಕರನ ತಂದೆಯಿಂದಲೇ ದುಷ್ಕೃತ್ಯ! - ಬಾಳೆಹೊನ್ನೂರು ಪೊಲೀಸ್ ಠಾಣೆ
ಅಪ್ರಾಪ್ತೆಯೋರ್ವಳು ಪ್ರಿಯಕರನ ತಂದೆಯಿಂದಲೇ ಅತ್ಯಾಚಾರಕ್ಕೆ ಒಳಗಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
ಚಿಕ್ಕಮಗಳೂರು: ಅಪ್ರಾಪ್ತೆ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರ ಎಸಗಿರುವ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಚಂದ್ರು ಎಂಬಾತ ಅತ್ಯಾಚಾರ ಆರೋಪಿಯಾಗಿದ್ದು, ಆರೋಪಿಯ ವಿರುದ್ಧ ಬಾಲಕಿಯ ತಾಯಿ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿ ಚಂದ್ರುವನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
ಆರೋಪಿಯ ಮಗನನ್ನು ಪ್ರೀತಿಸುತ್ತಿದ್ದ ಸಂತ್ರಸ್ತೆ
ಬಾಲಕಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ತನ್ನ ಪ್ರಿಯಕರನನ್ನು ಹುಡುಕಿಕೊಂಡು ಆತನ ಮನೆಗೆ ಬಂದಿದ್ದಳು. ಈ ವೇಳೆ ಪ್ರಿಯಕರ ಮನೆಯಿಂದ ಹೊರಗೆ ತೆರಳಿದ್ದು, ಆತನ ತಂದೆ ಚಂದ್ರು ಬಾಲಕಿಯನ್ನು ಮನೆಯಲ್ಲಿಯೇ ಉಳಿಸಿಕೊಂಡು ಅತ್ಯಾಚಾರ ನಡೆಸಿದ್ದಾನೆ ಎಂದು ಆರೋಪಿಸಿ ಬಾಲಕಿಯ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಇದನ್ನೂ ಓದಿ: ಡ್ರಗ್ಸ್ ಪ್ರಕರಣದಲ್ಲಿ ಹಣ ವಸೂಲಿ ಆರೋಪ: ಸತತ 11 ಗಂಟೆ ಪ್ರಭಾಕರ್ ಸೈಲ್ ವಿಚಾರಣೆ