ETV Bharat / crime

ಪತ್ನಿಯ ಅಪ್ರಾಪ್ತ ತಂಗಿ ಮೇಲೆ ಅತ್ಯಾಚಾರ: ಪೊಕ್ಸೊ ಕಾಯ್ದೆಯಡಿ ಆರೋಪಿ ಬಂಧನ - ಅಪ್ರಾಪ್ತೆಯನ್ನು ಗರ್ಭಿಣಿಯಾಸಿದ ವ್ಯಕ್ತಿ ಬಂಧನ

ಶಿವಮೊಗ್ಗದ ಸಾಗರ ತಾಲೂಕಿನಲ್ಲಿ ಪತ್ನಿಯ ಅಪ್ರಾಪ್ತ ತಂಗಿಯ ಮೇಲೆ ಅತ್ಯಾಚಾರ ನಡೆಸಿ, ಗರ್ಭಿಣಿಯಾಗಿಸಿದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ.

Rape on wife's sister: posco case in shivamogga
ಪತ್ನಿಯ ಅಪ್ರಾಪ್ತ ತಂಗಿಯನ್ನೇ ಗರ್ಭಿಣಿಯನ್ನಾಗಿಸಿದ ಆರೋಪ: ಪೊಕ್ಸೋ ಕಾಯ್ದೆಯಡಿ ಆರೋಪಿ ಬಂಧನ
author img

By

Published : May 10, 2022, 8:20 AM IST

ಶಿವಮೊಗ್ಗ: ಹೆಂಡತಿಯ ಅಪ್ರಾಪ್ತ ತಂಗಿಯನ್ನು ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ ಸಾಗರ ತಾಲೂಕಿನ ನಿವಾಸಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ವಿಶ್ವ ಬಂಧಿತ ಆರೋಪಿ. 17 ವರ್ಷದ ಬಾಲಕಿಯನ್ನು ಗರ್ಭಿಣಿಯನ್ನಾಗಿಸಿದ್ದ ಈತನ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಆರೋಪಿಯು ಸಾಗರ ತಾಲೂಕಿನ ಮಹಿಳೆಯನ್ನು ಪ್ರೀತಿಸಿ ಮದುವೆಯಾಗಿದ್ದ. ಈ ಮಹಿಳೆಗೆ ತಂದೆ ಇಲ್ಲದ ಕಾರಣ, ಆಕೆಯ ತಾಯಿ ಹಾಗೂ ಆಕೆಯ ತಂಗಿಯನ್ನು ಆರೋಪಿ ತನ್ನ ಮನೆಗೆ ಕರೆಸಿಕೊಂಡಿದ್ದ. ಎಲ್ಲರೂ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಹೆಂಡತಿಯ ತಂಗಿಯ ಜೊತೆ ವಿಶ್ವ ಸಲುಗೆ ಬೆಳೆಸಿ, ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಇತ್ತೀಚೆಗೆ ಹೊಟ್ಟೆ ನೋವು ಕಂಡು ಬಂದು ಮನೆಯಲ್ಲಿಯೇ ಮಗು ಜನನವಾಗುತ್ತದೆ. ಮಗುವನ್ನು ವಿಶ್ವ ಹಿತ್ತಲಿನಲ್ಲಿ ಹೂತು ಹಾಕಿದ್ದು, ಮನೆಯವರೇ ದುಷ್ಕೃತ್ಯಕ್ಕೆ ಬೆಂಬಲ ನೀಡಿದ್ದಾರೆ ಎನ್ನಲಾಗಿದೆ.

ಸಂತ್ರಸ್ತೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ವಿಶ್ವನನ್ನು ಪೊಕ್ಸೊ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬೆಳ್ಳಿ ಕಾಲ್ಗೆಜ್ಜೆಗೆ ಬಾಲಕಿ ಕೊಂದು ಶವ ಮರಳಲ್ಲಿ ಹೂತಿಟ್ಟ ಮಹಿಳೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.