ETV Bharat / crime

ಆಟೋ-ಕಾರು ಡಿಕ್ಕಿ: ಸ್ಥಳದಲ್ಲೇ ಏಳು ಮಂದಿಯ ದುರ್ಮರಣ - West Bengal road accident

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದು, 15 ಮಂದಿ ಗಾಯಗೊಂಡಿದ್ದಾರೆ.

seven killed in collision between auto and car in Murshidabad
ಆಟೋ - ಕಾರು ಡಿಕ್ಕಿ: ಸ್ಥಳದಲ್ಲೇ ಏಳು ಮಂದಿಯ ದುರ್ಮರಣ
author img

By

Published : Mar 11, 2021, 4:04 PM IST

Updated : Mar 11, 2021, 4:38 PM IST

ಮುರ್ಷಿದಾಬಾದ್‌ (ಪಶ್ಚಿಮ ಬಂಗಾಳ): ಆಟೋ ಮತ್ತು ಕಾರಿನ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಏಳು ಮಂದಿ ಮೃತಪಟ್ಟಿರುವ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ ಜಿಲ್ಲೆಯಲ್ಲಿ ನಡೆದಿದೆ.

ಮುರ್ಷಿದಾಬಾದ್‌ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ

ಮುರ್ಷಿದಾಬಾದ್ ಜಿಲ್ಲೆಯ ಸೂಟಿ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 34ರಲ್ಲಿ ಸಂಭವಿಸಿದ ಅಪಘಾತದಲ್ಲಿ ಇನ್ನೂ 15 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದನ್ನೂ ಓದಿ: 43 ಕೋಟಿ ರೂ. ತೆರಿಗೆ ವಂಚಿಸಿ GST ಅಧಿಕಾರಿಗಳಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ಭೂಪ ಅಂದರ್!

ಅಪಘಾತದ ರಭಸಕ್ಕೆ ಎರಡೂ ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿವೆ. ಮೃತರ ಪೈಕಿ ಆಟೋ ಚಾಲಕ ಫಿರೋಜ್ ಶೇಖ್ (26) ಹಾಗೂ ಅಜ್ಫರುಲ್ ಶೇಖ್ (24) ಎಂಬವರನ್ನು ಮಾತ್ರ ಗುರುತಿಸಲಾಗಿದೆ. ಉಳಿದವರ ಬಗ್ಗೆ ಮಾಹಿತಿ ಸಿಕ್ಕಿಲ್ಲ.

Last Updated : Mar 11, 2021, 4:38 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.