ಭಟ್ಕಳ : ಶಾಲಾ ಬಾಲಕಿಯೋರ್ವಳನ್ನು ಪುಸಲಾಯಿಸಿ ಬೆಂಗಳೂರಿಗೆ ಕರೆದುಕೊಂಡು ಹೋಗಿ ಆಕೆಯ ಜತೆಗೆ ಲೈಂಗಿಕ ಸಂಪರ್ಕ ಬೆಳೆಸಿದ ಆರೋಪದ ಮೇರೆಗೆ ಪೊಲೀಸರು ಓರ್ವನನ್ನ ಬಂಧಿಸಿದ್ದಾರೆ.
ಬಂಧಿತನನ್ನು ತಾಲೂಕಿನ ಚಿತ್ರಾಪುರ ಬಡ್ಡುಕುಳಿ ನಿವಾಸಿ ಅಕ್ಷಯ ಮಂಜುನಾಥ ನಾಯ್ಕ್ (23) ಎಂದು ಗುರುತಿಸಲಾಗಿದೆ. ಶಾಲಾ ಬಾಲಕಿ ನಾಪತ್ತೆಯಾದ ಬಗ್ಗೆ ದೂರನ್ನು ಸ್ವೀಕರಿಸಿದ್ದ ಪೊಲೀಸರು, 48 ಗಂಟೆಗಳ ಒಳಗಾಗಿ ಬಾಲಕಿಯನ್ನು ಬೆಂಗಳೂರಿನಲ್ಲಿ ಪತ್ತೆ ಹಚ್ಚಿ ಕರೆ ತಂದಿದ್ದರು.
ಇದೀಗ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಬಾಲಕಿಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿರುವುದು ದೃಢಪಟ್ಟ ಹಿನ್ನೆಲೆ ಆತನ ವಿರುದ್ಧ ಪೊಕ್ಸೊ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಭಟ್ಕಳ ಗ್ರಾಮೀಣ ಠಾಣೆಯ ಎಸ್‌ಐ ಭರತ್ ತನಿಖೆ ಕೈಗೊಂಡಿದ್ದಾರೆ.