ಗೋಸಾಬಾ (ಪಶ್ಚಿಮ ಬಂಗಾಳ): ಕಚ್ಛಾ ಬಾಂಬ್ ಸ್ಫೋಟಗೊಂಡು ಬಿಜೆಪಿಯ ಆರು ಮಂದಿ ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ವಿಧಾನಸಭಾ ಚುನಾವಣೆಯ ಪ್ರಚಾರ ಅಬ್ಬರ ಜೋರಾಗಿದೆ. ಈ ಮಧ್ಯೆ ರಾಜ್ಯದಲ್ಲಿ ಹಿಂಸಾಚಾರ ಮುಂದುವರೆದಿದೆ.
ದಕ್ಷಿಣ 24 ಪರಗಣ ಜಿಲ್ಲೆಯ ಗೋಸಾಬಾದಲ್ಲಿ ವಿವಾಹ ಕಾರ್ಯಕ್ರಮ ಮುಗಿಸಿಕೊಂಡು ಹಿಂದಿರುಗುತ್ತಿದ್ದ ವೇಳೆ ಕಚ್ಛಾ ಬಾಂಬ್ ಸ್ಫೋಟಗೊಂಡು ಆರು ಮಂದಿ ಕಾರ್ಯಕರ್ತರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಇದನ್ನೂ ಓದಿ: ಜಮೀನು ವಿಚಾರಕ್ಕೆ ಘರ್ಷಣೆ: ಮೂವರು ಬಲಿ, ಯೋಧ ಅರೆಸ್ಟ್
ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತರು ನಮ್ಮ ಮೇಲೆ ಬಾಂಬ್ ಎಸೆದಿದ್ದಾರೆ ಎಂದು ಗಾಯಾಳುಗಳು ಆರೋಪಿಸಿದ್ದಾರೆ. ಆದರೆ ಈ ಆರೋಪವನ್ನು ಟಿಎಂಸಿ ತಳ್ಳಿಹಾಕಿದೆ.
ಇತ್ತೀಚೆಗಷ್ಟೇ ರಾಜ್ಯದ ಹಲವೆಡೆ ಕಚ್ಛಾ ಬಾಂಬ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.