ETV Bharat / crime

ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ: ಮದುವೆಗೆ ಹೊರಟಿದ್ದ ಒಂದೇ ಕುಟುಂಬದ ಆರು ಮಂದಿ ಸಾವು - ಆಟೋ - ಲಾರಿ ಡಿಕ್ಕಿ

Telangana road accident
ಮದುವೆಗೆ ಹೊರಟಿದ್ದ ಒಂದೇ ಕುಟುಂಬದ ಆರು ಮಂದಿ ಸಾವು
author img

By

Published : Jan 29, 2021, 12:28 PM IST

Updated : Jan 29, 2021, 12:52 PM IST

12:22 January 29

ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಒಂದೇ ಕುಟುಂಬದ ಆರು ಮಂದಿ ಭೀಕರ ರಸ್ತೆ ಅಪಘಾತದಿಂದಾಗಿ ಮಸಣ ಸೇರುವಂತಾಗಿದೆ.

Telangana road accident
ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ

ಮೆಹಬೂಬಾಬಾದ್ (ತೆಲಂಗಾಣ): ಆಟೋಗೆ ಲಾರಿ ಗುದ್ದಿ ಒಂದೇ ಕುಟುಂಬದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತೆಲಂಗಾಣದ ಮೆಹಬೂಬಾಬಾದ್​ ಜಿಲ್ಲೆಯಲ್ಲಿ ನಡೆದಿದೆ.  

ಮೂವರು ಮಹಿಳೆಯರು ಸೇರಿ ಆರು ಜನರು ಆಟೋದಲ್ಲಿ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದರು. ಆದರೆ ಮೆಹಬೂಬಾಬಾದ್​ ಜಿಲ್ಲೆಯ ಗುಡೂರ್ ಮಂಡಲದ ಮರ್ರಿಮಿಟ್ಟಾ ಎಂಬ ಪ್ರದೇಶದಲ್ಲಿ ಅಪಘಾತ ಸಂಭವಿಸಿದ್ದು, ಮದುವೆ ಮನೆ ಬದಲಾಗಿ ಅವರು ಮಸಣ ಸೇರುವಂತಾಗಿದೆ.

ಲಾರಿ ಚಾಲಕ ವೇಗವಾಗಿ ವಾಹನ ಚಲಾಯಿಸಿರುವುದೇ ದುರಂತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ. ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.  

Last Updated : Jan 29, 2021, 12:52 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.