ಕಡಪ(ಆಂಧ್ರ ಪ್ರದೇಶ) : ಭಗ್ನ ಪ್ರೇಮಿಯೊಬ್ಬ ಮನೆಗೆ ನುಗ್ಗಿ ವಿದ್ಯಾರ್ಥಿನಿಯ ಕತ್ತು ಸೀಳಿ ಹತ್ಯೆ ಮಾಡಿರುವ ದಾರುಣ ಘಟನೆ ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಬ್ಯಾಡ್ವೆಲ್ ಮಂಡಲದ ಚಿಂತಲಚೆರುವು ಎಂಬಲ್ಲಿ ನಡೆದಿದೆ. ಯುವತಿಯ ಚೀರಾಟವನ್ನು ಕೇಳಿ ಸ್ಥಳಕ್ಕೆ ಬಂದ ಸುತ್ತಮುತ್ತಲಿನ ಜನರು ಆರೋಪಿ ಚರಣ್‌ನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ತೀವ್ರವಾಗಿ ಗಾಯಗೊಂಡಿರುವ ಆರೋಪಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಯುವತಿ ಹಾಗೂ ಹತ್ಯೆ ಮಾಡಿದ ಆರೋಪಿ ಇಬ್ಬರೂ ಬಿವಿಆರ್ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದರು. ಇಬ್ಬರ ನಡುವಿನ ಪ್ರೇಮ ವಿಚಾರವೇ ಹತ್ಯೆಗೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.