ಬೆಳಗಾವಿ: ಕೌಟುಂಬಿಕ ಕಲಹ ಹಿನ್ನೆಲೆ ಜಿಲ್ಲೆಯ ಗೋಕಾಕ್ ಫಾಲ್ಸ್ ಮೇಲಿಂದ ಬಿದ್ದು ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಓದಿ: ಕೌಟುಂಬಿಕ ಕಲಹ: ನಡು ರಸ್ತೆಯಲ್ಲೇ ಹೆಂಡತಿಗೆ ಮಚ್ಚಿನಿಂದ ಹೊಡೆದ ಪತಿರಾಯ
ಶಿವಾನಂದ ಕುರಬೇಟ (55) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಇವರು ವಿದೇಶದ ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣವಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಫಾಲ್ಸ್ ಮೇಲಿಂದ ಜಿಗಿದಿರುವ ಈತ ಬಂಡೆಯ ಮೇಲೆ ಬಿದ್ದಿದ್ದಾನೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರ್ಯಾಚರಣೆ ಮೂಲಕ ಶವ ಮೇಲಕ್ಕೆ ಎತ್ತಲಾಗಿದೆ. ಗೋಕಾಕ್ ತಾಲೂಕಾಸ್ಪತ್ರೆಗೆ ಶವ ಸಾಗಿಸಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕವೇ ಕುಟುಂಬಕ್ಕೆ ಶವ ನೀಡಲಾಗಿದ್ದು, ಈ ಕುರಿತು ಗೋಕಾಕ್ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.